Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ತೋರಣಗಲ್ಲು: ನಕಲಿ ವೈದ್ಯ ವೃತ್ತಿ ಮಾಡುತ್ತಿದ್ದ ಓರ್ವನ ಕ್ಲಿನಿಕ್ ಸೀಜ್





ಬಳ್ಳಾರಿ,ನ.13

ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.

ಬಿ.ಎನ್.ವೀರೇಶ್ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದನು.

ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಆದೇಶದ ಮೇರೆಗೆ ಸಂಡೂರು ತಾಲ್ಲೂಕು ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಕ್ಷಯರೋಗ ನಿರ್ಮೂನಾಧಿಕಾರಿ ಡಾ.ಇಂದ್ರಾಣಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್ ನೇತೃತ್ವದ ತಂಡವು ದಾಳಿ ನಡೆಸಿ, ಕ್ಲಿನಿಕ್ ನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಹಾಗಾಗಿ ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬ0ದಲ್ಲಿ, ಅವರ ವೈದ್ಯಕೀಯ ಪದವಿ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ನಕಲಿ ವೈದ್ಯರು ಎಂದು ಕಂಡುಬoದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ಕ್ರಮ ಜರುಗಿಸಲಾಗುವುದು.

ದಾಳಿಯ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಂಡೆಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ನಿಜಾಮುದ್ದೀನ್ ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ