Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ.15 ರಂದು ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ ಬಳ್ಳಾರಿ ಮಹಾನಗರ ಪಾಲಿಕೆ ಸುತ್ತ 500 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ






ಬಳ್ಳಾರಿ,ನ.13

ಬಳ್ಳಾರಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 15 ರಂದು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ರಕ್ಷಣೆ ಒದಗಿಸುವ ಹಿತದೃಷ್ಠಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಮಹಾನಗರ ಪಾಲಿಕೆ ಸುತ್ತ-ಮುತ್ತಲಿನ 500 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

*ನಿಷೇಧಿಸಲಾದ ಚಟುವಟಿಕೆ:*

ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರೆ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತç, ಬಡಿಗೆ, ಬರ್ಚಿಗದೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು.

ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯ್ಯುವುದು, ಪಟಾಕಿ/ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತçಗಳು ಅಥವಾ ಸಾಧನಗಳು ಇವುಗಳನ್ನು ತೆಗೆದುಕೊಂಡು ತಿರುಗಾಡುವುದು.

ಕಾರು, ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ್ಯಾಲಿಯನ್ನು ಆಯೋಜಿಸುವುದು. ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5 ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವುದು (ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಹೊರಡುಪಡಿಸಿ).

ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಆಫೀಸರ್ ಅಭಿಪ್ರಾಯದಲ್ಲಿ ಸಭ್ಯತೆ, ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

--------------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ