Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

 ಪಕ್ಷ ಭೇಧ ಮರೆತು ನನಗೆ ಈ ಬಾರಿ ಬೆಂಬಲಿಸಿ ವಿಧಾನ ಪರಿಷತ್‌ನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿ ಹೇಳಿದರು.

ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಅಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟಿçÃಯ ಪಕ್ಷಗಳು ಪ್ರತಿ ಭಾರಿ ಈ ಚುನಾವಣೆಯಲ್ಲಿ ಕಲಬುರಗಿ, ಬೀದರ್ ರಾಯಚೂರು ಭಾಗಕ್ಕೆ ಅವಕಾಶ ನೀಡುತ್ತಾ ಬಂದಿವೆ ಇದರಿಂದ ಅಖಂಡ ಬಳ್ಳಾರಿ ಸೇರಿದಂತೆ ಕೊಪ್ಪಳ, ಯಾದಗಿರಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕಳೆದ ಬಾರಿ ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಅಲ್ಪ ಮತಗಳಿಂದ ಸೋತಿದ್ದೇನೆ, ಈ ಬಾರಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇ ಆದರೂ ಪಕ್ಷ ನನಗೆ ಅವಕಾಶ ನೀಡಲಿಲ್ಲ, ಹಾಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ ನನಗೆ ಮೊದಲನೇ ಪ್ರಾಶಸ್ತö್ಯ ಮತವನ್ನು ನೀಡುವ ಮೂಲಕ ಒಮ್ಮೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ವಿನಂತಿ ಮಾಡಿಕೊಂಡರು.

ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ ಮಾತನಾಡಿ ಅಖಂಡ ಬಳ್ಳಾರಿ ಜಿಲ್ಲೆಯ ನಮ್ಮೆಲ್ಲರ ಪ್ರತಿನಿಧಿಯಾಗಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ನಾರಾ ಪ್ರತಾಪ್ ರೆಡ್ಡಿಯವರನ್ನು ಬೆಂಬಲಿಸೋಣ ಎಂದು ಕರೆ ನೀಡಿದರು.

ಪ್ರತಾಪ್ ರೆಡ್ಡಿಯವರು ಉತ್ತಮ ನಾಯಕತ್ವ ಹೊಂದಿದ್ದು ವಿಧಾನ ಪರಿಷತ್‌ಗೆ ಆಯ್ಕೆಯಾದರೆ, ಸರ್ಕಾರದ ಮೇಲೆ ಒತ್ತಡ ತಂದು ಈ ಭಾಗದ ಅಭಿವೃದ್ಧಿ, ಶಿಕ್ಷಣ ನಿರುದ್ಯೋಗ ಸಮಸ್ಯೆಗಳ ಪರಿಹರಿಸುವ ಪ್ರಯತ್ನ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡ ಪಾಟೀಲ್ ಬೆಟ್ಟನಗೌಡ ಮಾತನಾಡಿ ನಾರಾ ಪ್ರತಾಪ್ ರೆಡ್ಡಿಯವರು ಜನಪರ ಚಿಂತೆನೆ, ರಾಜಕೀಯ ಪರಿಣಿತಿ ಹೊಂದಿರುವ ವ್ಯಕ್ತಿ, ಇಂತವರು ವಿಧಾನ ಪರಿಷತ್‌ಗೆ ಆಯ್ಕೆಯಾದರೆ ಪದವೀಧರರ ಎಲ್ಲಾ ನ್ಯೂನ್ಯತೆಗಳನ್ನು ಸರಿಪಡಿಸುತ್ತಾರೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ಮಾತನಾಡಿ ಕಳೆದ ಬಾರಿ ಅಲ್ಪ ಮತಗಳಿಂದ ಸೋತಿರುವ ನಾರಾ ಪ್ರತಾಪ್ ರೆಡ್ಡಿಯವರಿಗೆ ಈ ಬಾರಿ ಹೆಚ್ಚು ಮತಗಳನ್ನು ನೀಡುವ ಮೂಲಕ ಅವರನ್ನು ಗೆಲ್ಲಿಸಿಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ನಿಚ್ಚವನಹಳ್ಳಿ ಪರಶುರಾಮಪ್ಪ, ಪರಮೇಶ್ವರಪ್ಪ, ಕಣವಿಹಳ್ಳಿ ಮಂಜುನಾಥ್, ಹೀರೆಮೇಗಳಗೆರೆ ಬಸವರಾಜ, ರಾಜು, ನಂದೀಶ್ ರಾಯಪ್ಪ ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ