Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬರಗಾಲ ನಿರ್ವಹಣೆ: ಅಧಿಕಾರಿಗಳು ತುರ್ತು ಪರಿಸ್ಥಿತಿಯಂತೆ ಕೆಲಸ ಮಾಡಬೇಕು - ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್


ಬಳ್ಳಾರಿ,ಆ.11):
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ತುರ್ತು ಪರಿಸ್ಥಿತಿಯ ಮಾದರಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಹೇಳಿದರು.
ಮಂಗಳವಾರ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ವೀಡಿಯೋ ಸಂವಾದ ಕಾರ್ಯಕ್ರಮಕ್ಕೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ಕಚೇರಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರವು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಮತ್ತು ನೇರ ಸಂವಾದಕ್ಕಾಗಿ ಆರಂಭಿಸಿರುವ ‘ಪ್ರಜಾಸೇವೆ' ಇಲಾಖೆಯಲ್ಲಿ ಸರ್ಕಾರದ ಯೋಜನೆಗಳು ಹಾಗೂ ಪರಿಹಾರ ಕ್ರಮಗಳು ತಳಮಟ್ಟದ ಜನರಿಗೆ ತಲುಪಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಲಾಗಿದೆ ಎಂದು ಪ್ರತಿಪಾದಿಸಿದರು.
*164 ತಾಲ್ಲೂಕುಗಳಲ್ಲಿ ಭೀಕರ ಅಭಾವ:*
ರಾಜ್ಯದ ಒಟ್ಟು 240 ತಾಲ್ಲೂಕುಗಳ ಪೈಕಿ 164 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದೆ. ರೈತರು ಬೆಳೆ ನಷ್ಟದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ಅಲ್ಲದೆ ನೆರೆ ರಾಜ್ಯಗಳಲ್ಲೂ ಬೆಳೆ ಇಲ್ಲದ ಕಾರಣ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೆ.ಎಮ್.ಎಫ್ ಮೂಲಕ ತುಮಕೂರು ಸೇರಿದಂತೆ ವಿವಿಧೆಡೆ 1 ಲಕ್ಷ ಮೇವಿನ ಕಿಟ್‌ಗಳನ್ನು ವಿತರಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದರು.
*ವಿಬಿ ಜಿ ರಾಮ್ ಜಿ ಯೋಜನೆ ಮೂಲಕ ಉದ್ಯೋಗ:*
ಗ್ರಾಮೀಣ ಭಾಗದಿಂದ ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಖಾತರಿ ಕಾಮಗಾರಿಗಳಿಗೆ ವಿಬಿ ಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ 51,000 ಮಾನವ ದಿನಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಬೆಳೆ ವಿಮೆ ನೊಂದಣಿ ಸಮಯದಲ್ಲಿ ಆಸಕ್ತಿ ತೋರುವ ಇನ್ಶೂರೆನ್ಸ್ ಕಂಪನಿಗಳು, ರೈತರಿಗೆ ನಷ್ಟ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದಕ್ಕೆ, ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು.
*‘ಭಾರತ್ ಜೋಡೋ' ಸಂಘಗಳ ರಚನೆ:*
ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ಭಾವೈಕ್ಯತೆಯನ್ನು ಮೂಡಿಸಲು ಪ್ರತಿಯೊಂದು ಪಂಚಾಯಿತಿಯಲ್ಲಿ ‘ಭಾರತ್ ಜೋಡೋ' ಸಂಘಗಳನ್ನು ರಚಿಸಿ, ಪ್ರತಿ ಸಂಘಕ್ಕೆ ವಷÀðಕ್ಕೆ ರೂ.10 ಲಕ್ಷ ಅನುದಾನ ನೀಡುವ ವಿನೂತನ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಬರಗಾಲದ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂದ, ಪ್ರತಿಯೊಬ್ಬ ಜಿಲ್ಲಾಧಿಕಾರಿ, ಸಿಇಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಬೇಕು ಎಂದು ಸೂಚನೆ ನೀಡಿದರು.
----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ