Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: ಶೇ. 99.78 ರಷ್ಟು ಎಸ್‌ಐಆರ್ ಗಣತಿ ನಮೂನೆಗಳ ವಿತರಣೆ

ಬಳ್ಳಾರಿ,ಜು.16
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಗಣತಿ ನಮೂನೆಗಳನ್ನು ಮುದ್ರಿಸಿ ಮನೆ-ಮನೆ ಭೇಟಿ ನೀಡಿ ವಿತರಿಸುವ ಹಾಗೂ ಗಣಕೀಕರಣಗೊಳಿಸುವ ಕಾರ್ಯವು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಚುರುಕಿನಿಂದ ಸಾಗುತ್ತಿದೆ.
ಈ ಕ್ಷೇತ್ರದಲ್ಲಿ ಒಟ್ಟು 2,51,325 ಮತದಾರರಿದ್ದು, ಮುದ್ರಿಸಲಾದ ಒಟ್ಟು ಎಸ್‌ಐಆರ್ ಗಣತಿ ನಮೂನೆಗಳ ಪೈಕಿ 2,50,761 (ಶೇ. 99.78 ರಷ್ಟು) ಗಣತಿ ನಮೂನೆಗಳನ್ನು ಈಗಾಗಲೇ ಯಶಸ್ವಿಯಾಗಿ ವಿತರಿಸಲಾಗಿದೆ. ಕ್ಷೇತ್ರದ ಒಟ್ಟು ಶೇ. 97.21 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ.
ವಿತರಿಸಲಾದ ನಮೂನೆಗಳ ಪೈಕಿ 1,00,294 (ಶೇ. 39.91 ರಷ್ಟು) ನಮೂನೆಗಳ ಗಣಕೀಕರಣ ಕಾರ್ಯ ಮುಕ್ತಾಯಗೊಂಡಿದೆ. ಇದರಲ್ಲಿ ಆನ್‌ಲೈನ್ ಮೂಲಕ ಮತದಾರರಿಂದ ಸ್ವೀಕೃತವಾದ 432 ನಮೂನೆಗಳೂ ಸೇರಿವೆ.
ಕ್ಷೇತ್ರದಾದ್ಯಂತ ವಿವಿಧ ಕಾರಣಗಳಿಂದಾಗಿ ಒಟ್ಟು 4,673 ಗಣತಿ ನಮೂನೆಗಳನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ. ಅದರಲ್ಲಿ 2,329 ಮಂದಿ ಮರಣ ಹೊಂದಿದ ಮತದಾರರು, 1,850 ಮಂದಿ ಶಾಶ್ವತ ವಲಸೆ ಹೋದವರು, 463 ಮಂದಿ ಈಗಾಗಲೇ ಹೆಸರು ನೋಂದಾಯಿತರಾದವರು, 23 ಮಂದಿ ಪತ್ತೆಯಾಗದ/ ಗೈರು ಹಾಜರಾದವರು ಮತ್ತು 08 ಮಂದಿ ಇತರರು ಒಳಗೊಂಡಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮನೆ-ಮನೆ ಭೇಟಿ ನೀಡಿ ಗಣತಿ ನಮೂನೆ ವಿತರಿಸುವ ಕಾರ್ಯ ಮತ್ತು ಪರಿಶೀಲಿಸುವ ಪ್ರಕ್ರಿಯೆ ಜುಲೈ 29 ರ ವರೆಗೆ ನಡೆಯಲಿದೆ. ಹಾಗಾಗಿ ಅರ್ಹ ಮತದಾರರು ತಮ್ಮ ಮಾಹಿತಿಯನ್ನು ಸಂಬAಧಿಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ನೀಡಿ ಸಹಕರಿಸಬೇಕು ಎಂದು 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ರಾಜೇಶ್ ಹೆಚ್.ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ