Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ ಮಿದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ





ಬಳ್ಳಾರಿ,ನ.20

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (ಓಚಿegಟeಡಿiಚಿ ಜಿoತಿಟeಡಿi) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (ಂmoebiಛಿ meಟಿiಟಿgoeಟಿಛಿeಠಿhಚಿಟiಣis) ಪ್ರಕರಣಗಳು ಕಂಡುಬoದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.

ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು.

ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

ನೇಗ್ಲೇರಿಯಾ ಫೌಲರಿ ಅತ್ಯಂತ ವಿಷಕಾರಿ ಸೂಕ್ಷö್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.

ಹಾಗಾಗಿ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು. ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ (behಚಿviouಡಿಚಿಟ ಜisoಡಿಜeಡಿs) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವoತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ