Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ಕೆ.ಜಿ.ಶಾಂತಿ ಅಭಿಮತ ಸಂವಿಧಾನದ ಪ್ರಸ್ತಾವನೆಯಲ್ಲಿಯೇ ಅಡಗಿದೆ ದೇಶದ ಭದ್ರಬುನಾದಿ





ಬಳ್ಳಾರಿ,ಡಿ.05

ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಸ್ವಾತಂತ್ರö್ಯ ಮತ್ತು ಸಮಾನತೆ, ಭ್ರಾತೃತ್ವ, ಪ್ರಜಾಪ್ರಭುತ್ವ, ವ್ಯಕ್ತಿ ಗೌರವ ಸೇರಿದಂತೆ ಎಲ್ಲಾ ಅಂಶಗಳನ್ನು ಸಂವಿಧಾನದ ಪ್ರಸ್ತಾವನೆಯಲ್ಲಿ ಅಳವಡಿಸಲಾಗಿದ್ದು, ಇದೇ ನಮ್ಮ ದೇಶದ ಭದ್ರ ಬುನಾದಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಹೇಳಿದರು.

ವೀರಶೈವ ವಿದ್ಯಾವರ್ಧಕ ಸಂಸ್ಥೆ, ಜಿಲ್ಲಾ ನ್ಯಾಯಾಂಗ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನಗರದ ನಗರದ ವುಂಕಿ ಸಣ್ಣರುದ್ರಪ್ಪ ಕಾನೂನು ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದಿತು. 1949 ರ ನವೆಂಬರ್ 26 ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ನೆನಪಿಗಾಗಿ ಅಂಗೀಕಾರದ ದಿನವನ್ನು ಸ್ಮರಿಸಲು ಸಂವಿಧಾನ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಭಾರತ ಸರ್ಕಾರವು 2015 ರಲ್ಲಿ ನವೆಂಬರ್ 26 ಅನ್ನು ಸಂವಿಧಾನ ದಿನ ಮತ್ತು ಕಾನೂನು ದಿನಾಚರಣೆ ಎಂದು ಸಹ ಆಚರಿಸಲು ನಿರ್ದೇಶನ ನೀಡಿತು. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಲು ಸಂವಿಧಾನ ದಿನ ಆಚರಿಸಲಾಗುತ್ತದೆ ಎಂದು ಹೇಳಿದರು.

ನಮ್ಮ ಸಂವಿಧಾನ ವಿಶ್ವದಲ್ಲೇ ಅತಿದೊಡ್ಡ ಲಿಖಿತ ರೂಪದಲ್ಲಿದ್ದು, ದೇಶದಲ್ಲಿ ಯಾವುದೇ ಕಾಯ್ದೆ-ಕಾನೂನುಗಳನ್ನೂ ರೂಪಿಸಬೇಕಾದರೆ ಅದರ ಭದ್ರ ಬುನಾದಿಯಾಗಿ ಸಂವಿಧಾನ ಕಾರ್ಯನಿರ್ವಹಿಸುತ್ತದೆ. ದೇಶದಲ್ಲಿ ಆಡಳಿತ, ಸರ್ಕಾರದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳು, ಎಲ್ಲ ಕಾಯ್ದೆಗಳು ಕಾನೂನಾತ್ಮಕವಾಗಿ ಕಾರ್ಯನಿರ್ವಹಿಸಲು ಸಂವಿಧಾನ ಮಾರ್ಗದರ್ಶನ ಮಾಡುತ್ತದೆ ಎಂದು ತಿಳಿಸಿದರು.

ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಮರೆಯಬಾರದು. ನಮ್ಮ ಸಂವಿಧಾನದoತೆ ನೇಪಾಳ ಮತ್ತು ಪಾಕಿಸ್ತಾನ ದೇಶಗಳ ಸಂವಿಧಾನವೂ ರಚನೆಯಾಯಿತು. ಅಲ್ಲಿ ಸಂವಿಧಾನಗಳೇ ಬದಲಾವಣೆಗಳಾದವು. ಆದರೆ ನಮ್ಮ ಸಂವಿಧಾನದಲ್ಲಿ ಕೇವಲ ತಿದ್ದುಪಡಿ ಮಾಡಲಾಯಿತು ಎಂದು ತಿಳಿಸಿದರು.

ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ. ಹಲವು ಜಾತಿ-ಧರ್ಮ, ಭಾಷೆ, ವಿವಿಧ ಸಂಸ್ಕೃತಿ ಒಳಗೊಂಡಿದ್ದು, ಸಂವಿಧಾನದ ಪೂರಕವಾಗಿ ಜೀವನ ಮಾಡಿದರೆ ಉತ್ತಮ ಪ್ರಜೆಯಾಗಲು ಸಾಧ್ಯ. ಸಂವಿಧಾನ ವಿರುದ್ಧವಾಗಿ ನಡೆದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಂವಿಧಾನದಲ್ಲಾದ ಹಲವು ತಿದ್ದುಪಡಿಗಳನ್ನು ಈಗಿನ ವಕೀಲರೂ ಪರಿಪೂರ್ಣವಾಗಿ ಅರ್ಥೈಸಿಕೊಳ್ಳುವ ಮೂಲಕ ಸಾಮಾನ್ಯ ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆ ಭೋದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ವುಂಕಿ ಸಣ್ಣರುದ್ರಪ್ಪ ಕಾನೂನು ಕಾಲೇಜಿನ ಅಧ್ಯಕ್ಷ ಟಿ.ನರೇಂದ್ರ ಬಾಬು, ಸದಸ್ಯರಾದ ಚಂದ್ರಶೇಖರ್, ಉಡೇದ ಪ್ರಭುದೇವ, ಕಾಲೇಜಿನ ಪ್ರಾಚಾರ್ಯರಾದ ಡಾ.ಕೆ.ರಜನಿ ಕುಮಾರಿ ಸೇರಿದಂತೆ ಕಾಲೇಜಿನ ಆಡಳಿತ ಸಿಬ್ಬಂದಿ, ಭೋದಕ-ಭೋದಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ