Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.03 ರಂದು ವಿಶ್ವ ವಿಕಲಚೇತನ ದಿನಾಚರಣೆ

ವಿಜಯನಗರ(ಹೊಸಪೇಟೆ), ಡಿಸೆಂಬರ್.01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ಕ್ರೀಡಾ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ಸಂಘಗಳು ಹಾಗೂ ಎಂಆರ್‌ಡಬ್ಲೂ, ಯುಆರ್‌ಡಬ್ಲೂ, ವಿಆರ್‌ಡಬ್ಲೂ ನ ಸಹಯೋಗದಲ್ಲಿ ಡಿಸೆಂಬರ್.03 ರಂದು ಬೆಳಿಗ್ಗೆ 10:30 ಕ್ಕೆ, ನಗರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ವೇದಿಕೆ ಕಾರ್ಯಕ್ರಮದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ನಮೋಶಿ, ವೈ.ಎಂ.ಸತೀಶ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹಾಗೂ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರು ಭಾಗವಹಿಸಲಿದ್ದಾರೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಎಸ್.ಶ್ವೇತಾ ಉಪಸ್ಥಿತಿ ಇರಲಿದೆ  .
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಶ್ರೀಪುಟ್ಟರಾಜ ಗವಾಯಿಗಳ ಭಾವಚಿತ್ರ ಮೆರವಣಿಗೆಯನ್ನು ನಗರದ ನೆಹರು ಕಾಲೋನಿಯ ಸಹಕಾರಿ ಕಲ್ಯಾಣ ಮಂಟಪದಿಂದ ವಾಲ್ಮೀಕಿ ವೃತ್ತ, ರಾಜ ವೀರಮದಕರಿ ವೃತ್ತ, ಉದ್ಯೋಗ ಪೆಟ್ರೋಲ್ ಬಂಕ್, ದರ್ಗಾ ಮಸೀದಿ, ಗಾಂಧಿ ವೃತ್ತ, ಕೇಂದ್ರ ಬಸ್ ನಿಲ್ದಾಣದ ಮಾರ್ಗವಾಗಿ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದವರಗೆ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ