Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಳ್ಳಾರಿಯಲ್ಲಿ ಮಹಿಳೆಯರಿಗಾಗಿ 10 ದಿನಗಳ ಉಚಿತ ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ


ಬಳ್ಳಾರಿ,ಜು.30
ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ಮಹಿಳೆಯರಿಗಾಗಿ 'ಸಿಡಾಕ್' ವತಿಯಿಂದ ನಗರದಲ್ಲಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ತರಬೇತಿ ಅವಧಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಅಗತ್ಯವಿರುವ ಹಲವು ವಿಷಯಗಳ ಕುರಿತು ಅನುಭವಿ ತಜ್ಞರಿಂದ ಉಪನ್ಯಾಸ ಮತ್ತು ಮಾಹಿತಿ ನೀಡಲಾಗುವುದು. ಸ್ವಯಂ ಉದ್ಯಮ ಆಯ್ಕೆ ಮಾಡುವ ವಿಧಾನ, ಯಶಸ್ವಿ ಉದ್ಯಮಿಯ ಲಕ್ಷಣಗಳು, ನಾಯಕತ್ವ ಗುಣಗಳು, ಉದ್ಯಮ ಪ್ರಾರಂಭಿಸುವ ವಿವಿಧ ಹಂತಗಳು ಹಾಗೂ ವ್ಯಾಪಾರೋದ್ಯಮದ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.
ಇದರೊಂದಿಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ ಹಾಗೂ ಸಾಲ ಸೌಲಭ್ಯಗಳು, ಹಣಕಾಸು ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ ಮತ್ತು ಯೋಜನೆ ವರದಿ ತಯಾರಿಸುವ ಕುರಿತು ಸವಿಸ್ತಾರವಾಗಿ ತಿಳಿಸಿಕೊಡಲಾಗುವುದು. ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಹಂತದಲ್ಲೂ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಅಲ್ಲದೆ, ಈಗಾಗಲೇ ತರಬೇತಿ ಪಡೆದು ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಉದ್ಯಮಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
*ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿವರ:*
18 ರಿಂದ 50 ವರ್ಷಗಳೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ‘ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ’ ಕಚೇರಿಯನ್ನು ಖುದ್ದಾಗಿ ಅಥವಾ ಮೊ.7483538942 / 9449226221 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ