Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಸದ ಗೋವಿಂದ ಎಂ ಕಾರಜೋಳ ಸಲಹೆ ಶಾಲೆಗಳಲ್ಲಿ ಪ್ರತಿ ಶನಿವಾರ ಯೋಗ ಕಲಿಕೆ ಕಡ್ಡಾಯವಾಗಲಿ



ಚಿತ್ರದುರ್ಗಜೂನ್.21:

ರಾಜ್ಯ ಸರ್ಕಾರ ಎಲ್ಲ ಶಾಲೆಗಳಲ್ಲಿ ಪ್ರತಿ ಶನಿವಾರ ಒಂದು ಗಂಟೆ ಯೋಗ ಕಲಿಯುವುದನ್ನು ಕಡ್ಡಾಯವಾಗಿಸಬೇಕು. ಮಕ್ಕಳು ಚಿಕ್ಕಂದಿನಲ್ಲಿಯೇ ಯೋಗ ಕಲಿಯುವುದರಿಂದ ಶಿಸ್ತು ಮೂಡುತ್ತದೆ ಹಾಗೂ ಉತ್ತಮ ಆರೋಗ್ಯ ಲಭಿಸುತ್ತದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತ ದೇಶದ್ದಾಗಿದೆ. ಮೊದಲಿಗೆ ಯೋಗ ಎನ್ನುವುದು ಒಂದು ಧರ್ಮಕ್ಕೆ ಸೀಮಿತವಾದುದು ಎನ್ನುವ ಸಂಕುಚಿತ ಮನೋಭಾವವಿತ್ತು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಅಂತರಾಷ್ಟಿçÃಯ ಯೋಗ ದಿನಾಚರಣೆ ಆಚರಿಸಿಲು ವಿಶ್ವ ಸಂಸ್ಥೆಗೆ ಮನವಿ ಮಾಡಿದರು. 2014 ರಲ್ಲಿ ವಿಶ್ವ ಸಂಸ್ಥೆಯಲ್ಲಿ ಸರ್ವಾನುಮತದಿಂದ ಜೂನ್.21ನ್ನು ಅಂತರಾಷ್ಟಿçÃಯ ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿತು. ಇಂದು ವಿಶ್ವದ 187 ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಗವನ್ನು ವಿಶ್ವದಾದ್ಯಂತ ಪಸರಿಸಲು ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲಿ ಆಯುಷ್ ಇಲಾಖೆಯನ್ನು ಬಲಪಡಿಸಲಾಗಿದೆ. ಹೆಚ್ಚಿನ ವೈದ್ಯರನ್ನು ಸಹ ನೇಮಕ ಮಾಡಲಾಗಿದೆ. ಯೋಗ ದಿನಾಚರಣೆಗೆ ಜಿಲ್ಲೆಯ ಯೋಗ ಸಂಸ್ಥೆಗಳು ಕೈ ಜೋಡಿಸಿರುವುದು ಸಂತಸದ ಸಂಗತಿಯಾಗಿ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಮಾತನಾಡಿ, ಯೋಗದಿಂದ ಜೀವನದಲ್ಲಿ ಸಕಾರಾತ್ಮಕ ಚಿಂತನೆ ಹಾಗೂ ಸದೃಢ ಮನೋಭಾವ ಬೆಳೆಯುವುದು. ಯೋಗ ಒಂದು ದಿನಕ್ಕೆ ಸೀಮಿತವಾಗಿರಬಾರದು. ವರ್ಷದ 365 ದಿನಗಳ ಕಾಲ ಯೋಗಾಭ್ಯಾಸ ಮಾಡಬೇಕು ಎಂದರು.

ಯೋಗ ದೇಶದ ಸಾಂಸ್ಕೃತಿಕತೆಯ ಪ್ರತೀಕವಾಗಿದೆ. ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು. ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಸಾಮೂಹಿಕ ಯೋಗಭ್ಯಾಸದಲ್ಲಿ ತೊಡಗಿರುವುದು ಉತ್ತಮ ಸಂಗತಿಯಾಗಿದೆ. ಯೋಗ ಸಂಸ್ಥೆಗಳು ವರ್ಷ ವರ್ಷವೂ ಹೆಚ್ಚಿನ ಸಂಖ್ಯೆಯ ಜನರಿಗೆ ಯೋಗ ಪಸರಿಸುವ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಹೇಳಿದರು.

ಉದ್ಯಾನವನಗಳಲ್ಲಿ ಯೋಗಕ್ಕೆ ಪ್ರತ್ಯೇಕ ವೇದಿಕೆ:

ಅಂತರಾಷ್ಟಿçÃಯ ಯೋಗ ದಿನಾಚರಣೆ ಪ್ರೇರಣೆಯಿಂದ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಉದ್ಯಾನವನಗಳಲ್ಲಿ ಯೋಗ ಮಾಡಲು ಪ್ರತ್ಯೇಕ ವೇದಿಕೆ ಸ್ಥಳವನ್ನು ನಿರ್ಮಿಸುತ್ತಿದೆ. ಈಗಾಗಲೇ ನಗರ ಪ್ರಮುಖ ಉದ್ಯಾನವನಗಳಲ್ಲಿ ವೇದಿಕೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್ ಹೇಳಿದರು.

ಯೋಗದ ಜೊತೆ ಪರಿಸರ ರಕ್ಷಣೆಯ ಕೆಲಸಕ್ಕೆ ಪ್ರತಿಯೊಬ್ಬರು ಮುಂದಾಗಬೇಕು. ಪ್ರತಿದಿನ ಒಂದು ಗಿಡಕ್ಕೆ ಒಂದು ಲೀಟರ್ ನೀರನ್ನು ಗಿಡ ಮರಗಳಿಗೆ ಹಾಕುವುದರ ಮೂಲಕ ಪರಿಸರ ಪ್ರತಿಯೊಬ್ಬರು ಮುಂದಾಗಬೇಕು. ಇದರಿಂದ ಪರಿಸರದಲ್ಲಿ ಗಿಡ ಮರಗಳ ಸಂಖ್ಯೆ ಗಣಿನೀಯವಾಗಿ ಹೆಚ್ಚಳವಾಗುವುದು ಎಂದರು.

ನಾಡಿನೆಲ್ಲೆಡೆ ಯೋಗವನ್ನು ಪ್ರಚಾರ ಮಾಡುವಲ್ಲಿ ಮಲ್ಲಾಡಿಹಳ್ಳಿಯ ರಾಘವೇಂದ್ರ ಸ್ವಾಮಿಗಳ ಕೊಡುಗೆ ಮಹತ್ವದಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮಗಳು ಇಲ್ಲದ ಸಂದರ್ಭದಲ್ಲಿ ಮಲ್ಲಾಡಿಹಳ್ಳಿಯ ರಾಘವೇಂದ್ರ ಸ್ವಾಮಿಗಳು ಯೋಗವನ್ನು ಗ್ರಾಮ ಗ್ರಾಮಗಳಿಗೆ ಕೊಂಡೊಯ್ಯದರು. ಶತಾಯುಷಿಗಳಾಗಿದ್ದ ಅವರು ತಮ್ಮ ಇಡೀ ಜೀವನವನ್ನು ಯೋಗಕ್ಕೆ ಮುಡಿಪಾಗಿಟ್ಟಿದ್ದರು. ಯೋಗಾಸಕ್ತರು ಮಲ್ಲಾಡಿಹಳ್ಳಿ ಆಶ್ರಮಕ್ಕೆ ಭೇಟಿ ನೀಡಿ ಅವರ ಯೋಗ ಸಾಧನೆಗಳನ್ನು ಅರಿಯಬೇಕು ಎಂದು ತಾಜ್‌ಪೀರ್ ಹೇಳಿದರು.

ಸಾವಿರಾರು ಜನರಿಂದ ಸಾಮೂಹಿಕ ಯೋಗಭ್ಯಾಸ:

ಈ ಬಾರಿಯ ಯೋಗ ದಿನಾಚರಣೆಯ ಘೋಷವಾಕ್ಯ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎನ್ನುವುದನ್ನು ಸಾರುವ ನಿಟ್ಟಿನಲ್ಲಿ ವಿವಿಧ ಯೋಗ ಸಂಸ್ಥೆಗಳಿAದ ಆಗಮಿಸಿದ ಸಾವಿರಾರು ಯೋಗ ಪಟುಗಳು, ನಗರದ ಹಳೆ ಮಾಧ್ಯಮಿಕ ಶಾಲೆಯ ಆವರಣದಲ್ಲಿ 45 ನಿಮಿಷಗಳ ಕಾಲ ಸಾಮೂಹಿಕ ಯೋಗಾಭ್ಯಾಸ ಮಾಡಿದರು. ಯೋಗ ಶಿಕ್ಷಕಿ ಹೇಮಾವತಿ ಸಾಮೂಹಿಕ ಯೋಗಭ್ಯಾಸ ಆಸನಗಳನ್ನು ಬೋಧಿಸಿದರು. ಯೋಗಪಟುಗಳು ತಾಡಸನ, ವೃಕ್ಷಾಸನ, ಪಾದಹಸ್ತಸನ, ಅರ್ಧಚಕ್ರಾಸನ, ತ್ರಿಕೊಣಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟಾçಸನ, ಉಷ್ಟಾçಸನ, ಶಶಾಂಕಾಸನ, ಉಸ್ಥಾನ, ಮಂಡೂಕಾಸನ, ವಕ್ರಾಸನ, ಮಕಾರಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉಸ್ಥನ ಪಾದಾಸನ, ಅರ್ಧಹಲಾಸನ, ಪವನಮುಕ್ತಾಸನ, ಶವಾಸನ, ಕಪಾಲಬಾತಿ, ನಾಡಿಶೋಧನೆ ಪ್ರಾಣಾಯಾಮ, ಶೀತಲೀ ಪ್ರಾಣಾಯಾಮ ಯೋಗಗಳನ್ನು ಮಾಡಿದರು. ನಂತರ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದ ರಷ್ಮಿ ಅಕ್ಕನವರು ಧ್ಯಾನ ಮತ್ತು ಯೋಗ ಸಂಕಲ್ಪ ಬೋದಿಸಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿ.ಪಂ.ಉಪಕಾರ್ಯದರ್ಶಿ ರಂಗಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲಾತೇಶ್ ಮುದ್ದಜ್ಜಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‌ಪೀರ್ ಅವರು ಸಾಮೂಹಿಕ ಯೋಗಭ್ಯಾಸದಲ್ಲಿ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಚಿತ್ರದುರ್ಗ ಅಮೃತ ಆರ್ಯವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ವಿಶೇಷ ಯೋಗ ನೃತ್ಯ ಪ್ರದರ್ಶಿಸಿದರು.

ನಗರ ಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲೆಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು, ಸದಸ್ಯರು ಪಾಲ್ಗೊಂಡಿದ್ದರು. ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಆಯುಷ್ ವೈದ್ಯಾಧಿಕಾರಿ ನಾರದಮುನಿ ಪ್ರಸ್ತಾವಿಕವಾಗಿ ಮಾತನಾಡಿದರು. ವೈದ್ಯಾಧಿಕಾರಿ ಮಂಜುಳಾ ಸ್ವಾಗತಿಸಿದರು. ವೈದ್ಯಾಧಿಕಾರಿ ಪ್ರಶಾಂತ್ ವಂದಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ