Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಭದ್ರಾವತಿ ಆಕಾಶವಾಣಿಯ ಕ್ಯಾಂಪಸ್ ಕಟ್ಟೆ ಗೆ ೫೦ರ ಸಂಭ್ರಮ

ಶಿವಮೊಗ್ಗ, ಜುಲೈ ೨೪, 

ಯುವ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕಾಗಿಯೇ ರೂಪಿತವಾದ ಆಕಾಶವಾಣಿ ಭದ್ರಾವತಿಯ ಕ್ಯಾಂಪಸ್‌ಕಟ್ಟೆ ೫೦ನೇ ಕಾರ್ಯಕ್ರಮವು ದಿನಾಂಕ ೨೫.೦೭.೨೦೨೪ರ ಗುರುವಾರ ಬೆಳಿಗ್ಗೆ ೧೦ ಗಂಟೆಯಿoದ ೧೧ಗಂಟೆಯವರೆಗೆ ನೇರಪ್ರಸಾರದಲ್ಲಿ ಪ್ರಸಾರವಾಗಲಿದೆ.

ಕ್ಯಾಂಪಸ್‌ಕಟ್ಟೆ ಎನ್ನುವ ಕಾರ್ಯಕ್ರಮದಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನೇರಪ್ರಸಾರದಲ್ಲಿ ವಿವಿಧ ಮಹನೀಯರು, ಸಾಹಿತಿಗಳು, ಸಾಧಕರು ಮತ್ತು ಆಯ ಪ್ರದೇಶದ ವಿಶೇಷತೆಯನ್ನು ತಿಳಿಸುತ್ತಾರೆ. ಪ್ರತೀ ಕಾರ್ಯಕ್ರಮದಲ್ಲಿ ೬ ರಿಂದ ೮ ವಿದ್ಯಾರ್ಥಿಗಳು ಭಾಗವಹಿಸಿ ಮಾಹಿತಿ ನೀಡುತ್ತಾರೆ. ವಿದ್ಯಾರ್ಥಿಗಳು ಮಾಹಿತಿ ನೀಡಿದ ಮಹನೀಯರಿಗೆ ಸಂಬoಧಿಸಿದ ಪ್ರಶ್ನೆಗಳನ್ನು ಸಾರ್ವಜನಿಕರಿಗೆ ನೀಡಿ ಅವರಿಂದ ವಾಟ್ಸಪ್ ಮುಖಾಂತರ ಉತ್ತರ ಪಡೆದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಚಿತ್ರಗೀತೆಗಳ ಸಂಗಮವಾದ ಈ ಕಾರ್ಯಕ್ರಮದಲ್ಲಿ ಇದುವರೆಗೆ ವಿವಿಧ ಕಾಲೇಜಿನ ೪೦೦ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಕಾಲೇಜಿನಿಂದ ನೇರಪ್ರಸಾರದಲ್ಲಿ ಭಾಗವಹಿಸಿದ್ದು ಈ ಕಾರ್ಯಕ್ರಮದ ಹೆಗ್ಗಳಿಕೆ. ೨೫.೦೭.೨೦೨೪ರ ಗುರುವಾರ ಬೆಳಿಗ್ಗೆ ೧೦ಗಂಟೆಯಿoದ ೧೧ಗಂಟೆವರೆಗೆ MPMES ಸ್ವತಂತ್ರ ಪದವಿಪೂರ್ವಕಾಲೇಜು ಭದ್ರಾವತಿಯ ಕ್ಯಾಂಪಸ್‌ನಿ0ದ ನೇರಪ್ರಸಾರದಲ್ಲಿ ಪ್ರಸಾರವಾಗಲಿದೆ. ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಈ ೫೦ನೇ ಕಾರ್ಯಕ್ರಮ ಪ್ರಸಾರವಾಗುತ್ತಿರುವುದನ್ನು ತಿಳಿಸಲು ಹೆಮ್ಮೆ ಆಗುತ್ತದೆ ಎಂದು ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು FM 103.5 ಹಾಗೂ MW 675 khz ನಲ್ಲಿ ಕೇಳುವದರೊಟ್ಟಿಗೆ ಜಗತ್ತಿನಾದ್ಯಂತAkashavani Bhadravathi live streaming ಮತ್ತು prasarbharati news on air app ನಲ್ಲಿ ಪ್ರಸಾರ ಸಮಯದಲ್ಲಿ ಕೇಳಬಹುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ