Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಳ್ಳಾರಿಯ ಹುಸೇನ್ ನಗರದಲ್ಲಿ ಲೈವ್ ವಿಡಿಯೋ ಮಾಡುತ್ತಲೆ ಸಾವಿಗೆ ಶಾರಣದ ಗೃಹಿಣಿ

 

ಬಳ್ಳಾರಿ, ಡಿ.22: ನಗರದ ಹುಸೇನ್ ನಗರದಲ್ಲಿ ಗೃಹಿಣಿಯೊಬ್ಬಳು ವೀಡಿಯೋ ಮಾಡುತ್ತಲೇ ತಮ್ಮ ನೋವನ್ನು ವ್ಯಕ್ತಪಡಿಸಿ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನಡೆದಿದೆ.
ಮೃತರನ್ನು ಮುನ್ನಿ (24) ಎಂದು ಗುರುತಿಸಲಾಗಿದೆ. ಮುನ್ನಿ ವಿವಾಹಿತರಾಗಿದ್ದು, ಪತಿಯಿಂದ ವಿ ಚ್ಛೇದನಗೊಂಡಿದ್ದರು ಎನ್ನಲಾಗಿದೆ
ವಿಚ್ಛೇದನದ ನಂತರ ಕಳೆದ ಆರು ತಿಂಗಳಿಂದ ಪತಿಯಿಂದ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಈ ನಡುವೆ ಮೊಹಮ್ಮದ್ ಶೇಖ್ ಎಂಬ ಯುವಕನೊಂದಿಗೆ ಸ್ನೇಹ ಹೊಂದಿದ್ದರು ಎಂದು ತಿಳಿದುಬಂದಿದೆ.
ಇತ್ತೀಚೆಗೆ ಮೊಹಮ್ಮದ್ ಶೇಖ್ ವಲಿ ಹಾಗೂ ಮುನ್ನಿ ನಡುವೆ ವೈಮನಸ್ಸು ಉಂಟಾಗಿದ್ದು, ಇದರಿಂದಾಗಿ ಮಾನಸಿಕವಾಗಿ ನೊಂದ ಮುನ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆತ್ಮಹತ್ಯೆಗೆ ಮುನ್ನ ವೀಡಿಯೋ ಮಾಡಿರುವ ಮಹಿಳೆ, ಆ ಮೂವರನ್ನು ಬಿಡಬೇಡಿ ಅವರು ನನಗೆ ಚೆನ್ನಾಗಿ ಹೊಡೆದಿದ್ದಾರೆ ನನ್ನ ಬಾಯಿ ಮುಚ್ಚಿ ಮನಬಂದಂತೆ ನನ್ನನ್ನು ಹೊಡೆದಿದ್ದಾರೆ ಎಂಬ ಹೇಳಿಕೆಗಳು ದಾಖಲಾಗಿವೆ ತಮ್ಮ ನೋವು ಹಾಗೂ ಸಂಕಟವನ್ನು ವ್ಯಕ್ತಪಡಿಸಿರುವುದು ಕರುಳು ಚುರ್ರ್ ಎನ್ನುವಂತಿದೆ.
ಘಟನೆ ಕುರಿತು ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವೀಡಿಯೋ ಸೇರಿದಂತೆ ಎಲ್ಲಾ ಅಂಶಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಬಳ್ಳಾರಿ ನಗರದ 9ನೇ ಕ್ರಾಸ್ ನಿವಾಸಿ ಮಾಬುನ್ನಿ ಅಲಿಯಾಸ್ ಮುನ್ನಿ (25) ಎಂಬ ಯುವತಿ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಯುವತಿ ಬಳ್ಳಾರಿ ನಗರದ ಖಾಸಗಿ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದು, ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದ ಮುನ್ನಿಗೆ ನಂತರ ವಿಚ್ಛೇದನವಾಗಿತ್ತು ಎಂದು ತಿಳಿದುಬಂದಿದೆ.
ವಿಚ್ಛೇದನದ ಬಳಿಕ ಮುನ್ನಿ, ಹುಸೇನ್ ನಗರದ ನಿವಾಸಿಯಾಗಿರುವ ಹಾಗೂ ಈಗಾಗಲೇ ವಿವಾಹಿತನಾಗಿ ಇಬ್ಬರು ಮಕ್ಕಳ ತಂದೆಯಾಗಿರುವ ಶೇಖ್ ವಲಿ ಎಂಬ ವ್ಯಕ್ತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ವಿಷಯ ಶೇಖ್ ವಲಿಯ ಪತ್ನಿ ಹಾಗೂ ತಾಯಿಗೆ ತಿಳಿದ ನಂತರ, ಮುನ್ನಿಯೊಂದಿಗೆ ಜಗಳವಾಡಿ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ವಿಡಿಯೋದಲ್ಲಿ ಮುನ್ನಿ,
“ಶೇಖ್ ವಲಿ ಮತ್ತು ಅವರ ಕುಟುಂಬದವರಿಂದ ನನಗೆ ತೀವ್ರ ಮಾನಸಿಕ ದೈಹಿಕ ಹಿಂಸೆಯಾಗಿದೆ. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಇವರಿಗೆ ತಕ್ಕ ಶಿಕ್ಷೆ ಆಗಬೇಕು” ಎಂದು ಹೇಳಿಕೊಂಡಿದ್ದಾರೆ.
ಘಟನೆಯ ಮಾಹಿತಿ ಪಡೆದ ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತಾಳ ಅಕ್ಕ ಹೊನ್ನುರ್ಬಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ವೈರಲ್ ವಿಡಿಯೋ, ಮೃತಳ ಹೇಳಿಕೆ ಹಾಗೂ ಲಭ್ಯವಿರುವ ಎಲ್ಲಾ ದಾಖಲೆಗಳನ್ನು ಆಧಾರವಾಗಿ ಪಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಗಾಂಧಿನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ಕುರಿತು ಮಾಹಿತಿ ಪಡೆದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿ ಘಟನೆಯ ಕುರಿತು ಅಘಾತವನ್ನು ವ್ಯಕ್ತಪಡಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ