Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಗೋಡೆಬರಹ ಕಡ್ಡಾಯ



ಕೊಪ್ಪಳ ಅಕ್ಟೋಬರ್ 14 ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಲ್ಯವಿವಾಹ ನಿಷೇಧ ಕಾನೂನು, ಅಪರಾಧಕ್ಕಿರುವ ಶಿಕ್ಷೆ ಪ್ರಮಾಣ ಮುಂತಾದವುಗಳ ಕುರಿತು ವಿವಾಹಗಳು ನಡೆಯುವ ದೇವಸ್ಥಾನ, ಶಾದಿಮಹಲ್, ಕಲ್ಯಾಣ ಮಂಟಪ ಹಾಗೂ ಫಂಕ್ಷನ್ ಹಾಲ್‌ಗಳಲ್ಲಿ ಶಾಶ್ವತ ಫಲಕ ಹಾಗೂ ಗೋಡೆಬರಹವನ್ನು ಕಡ್ಡಾಯವಾಗಿ ಬರೆಯಿಸಿ, ಪ್ರದರ್ಶಿಸಬೇಕು.

ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರನ್ವಯ 18 ವರ್ಷದೊಳಗಿನ ಹೆಣ್ಣು ಮಕ್ಕಳ ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯ ಕಲಂ 9 ರನ್ವಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವನ್ನು ವಿವಾಹ ಮಾಡಿಕೊಂಡ ಪುರುಷ, ಕಲಂ 10 ಮತ್ತು 11 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಆಯೋಜಿಸಿದವರು, ಆಯೋಜಿಸಲು ಉತ್ತೇಜನ ಅಥವಾ ಪ್ರೋತ್ಸಾಹ ನೀಡುವವರು ಮತ್ತು ಬಾಲ್ಯವಿವಾಹದಲ್ಲಿ ಭಾಗವಹಿಸುವವರಿಗೆ 1 ವರ್ಷದಿಂದ 2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷಗಳ ದಂಡ ವಿಧಿಸಬಹುದಾಗಿರುತ್ತದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹಗಳನ್ನು ತಡೆಗಟ್ಟುವುದು ಅತ್ಯಗತ್ಯವಾಗಿದ್ದು, ಕಾಯ್ದೆಯ ಕುರಿತು ಸಮುದಾಯಗಳಲ್ಲಿ ಮತ್ತಷ್ಟು ಜಾಗೃತಿಯನ್ನು ಮೂಡಿಸುವಂತೆ ನಿರ್ದೇಶಿಸಿದೆ. ಆದ್ದರಿಂದ ವಿವಾಹ ಆಯೋಜಕರು, ದೇವಸ್ಥಾನ, ಶಾದಿ ಮಹಲ್‌ಗಳ, ಉಸ್ತುವಾರಿ ಸದಸ್ಯರು, ಕಲ್ಯಾಣ ಮಂಟಪ ಮತ್ತು ಫಂಕ್ಷನ್ ಹಾಲ್‌ಗಳ ವ್ಯವಸ್ಥಾಪಕರುಗಳಿಗೆ ಅವರುಗಳ ವ್ಯಾಪ್ತಿಯಲ್ಲಿ ಆಯೋಜಿಸುವ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹಗಳಲ್ಲಿ ಅಥವಾ ಅಧೀನದಲ್ಲಿರುವ ಸ್ಥಳದಲ್ಲಿ ಬಾಲ್ಯವಿವಾಹ ಜರುಗದಂತೆ ಸೂಕ್ತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಬಾಲ್ಯವಿವಾಹ ನಡೆದಲ್ಲಿ, ಅಂತವರನ್ನು ಹಾಗೂ ಸರಕು ಮತ್ತು ಸೇವೆಗಳನ್ನು ಒದಗಿಸಿದವರನ್ನೂ ಸಹ ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸಲಾಗುವುದಾಗಿ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ