Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕಾರ್ಯಕರ್ತರೇ ಪಕ್ಷದ ಮಾಲೀಕರು ಸಿಟಿ ರವಿ.

ದೇಶದ ಅನೇಕ ಪಕ್ಷಗಳಿಗೆ ಮಾಲೀಕರುಗಳು ಇದ್ದಾರೆ. ಕುಟುಂಬ ರಾಜಕಾರಣದ ಮೂಲಕ ಅವರುಗಳೇ ಮತ್ತೆ ಮತ್ತೆ ಮಾಲೀಕ ರಾಗಿರುವುದನ್ನು ಮತ್ತು ಆಗುತ್ತಿರುವುದನ್ನು ಎಲ್ಲರೂ ನೋಡಿದ್ದೀರಿ ಆದರೆ ನಮ್ಮ ಬಿಜೆಪಿ ಪಕ್ಷಕ್ಕೆ ಯಾವುದೇ ಮಾಲೀಕರಿಲ್ಲ ನಮ್ಮಲ್ಲಿ ಪಕ್ಷದ ಕಾರ್ಯಕರ್ತರೇ ನಿಜವಾದ ಮಾಲೀಕರು ಎಂದು ರಾಜ್ಯದ ಮಾಜಿ ಮಂತ್ರಿ ಸಿ.ಟಿ ರವಿ ಹೇಳಿದರು

ನಗರದ ಹೊರವಲಯದ ವೈಷ್ಣವಿ ಹೋಟೆಲಿನ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.ಲೋಕಸಭಾ ಚುನಾವಣೆ ಹಿನ್ನೆಲೆಯಾಗಿ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬುವ ಕಾರ್ಯಕ್ರಮ ಇದಾಗಿತ್ತು. ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷವನ್ನು ತನ್ನ ಮನೆಯ ಎಂದು ಭಾವಿಸಿಕೊಂಡು ಭದ್ರ ಬುನಾದಿಯಿಂದ ಗಟ್ಟಿಮುಟ್ಟಾದ ಮನೆಯನ್ನು ಕಟ್ಟಬೇಕು. ಆದ್ದರಿಂದ ಪ್ರತಿಯೊಬ್ಬರೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕು. ನಮ್ಮ ಪ್ರಧಾನಿಯವರು ನಾನು ಪ್ರಧಾನ ಸೇವಕ ಎಂದು ಹೇಳಿದ್ದಾರೆ. ದೇಶದ 140 ಕೋಟಿ ಜನ ನನ್ನ ಪರಿವಾರ ಎಂದು ಬಿಡುವಿಲ್ಲದ ಕೆಲಸ ಮಾಡುತ್ತಿದ್ದಾರೆ. ಕಳೆದು ಹತ್ತು ವರ್ಷಗಳ ಕಾಲ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದು ವಿಶ್ವದ ಎಲ್ಲ ದೇಶಗಳು ಭಾರತವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ.

ಈಗಾಗಲೇ ನಾವು ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದ್ದೇವೆ. ಅನೇಕ ದೇಶಗಳ ನಾಯಕರು ಮೋದಿಜಿಯನ್ನು ಕೊಂಡಾಡುತ್ತಿದ್ದಾರೆ. ವಿಶ್ವದ ಜನಪ್ರಿಯ ನಾಯಕ ಎಂದು ಅಮೆರಿಕ ಹೇಳಿದೆ. ಪ್ರಪಂಚದಲ್ಲಿ 5ನೇ ದುರ್ಬಲ ರಾಷ್ಟ್ರವಾಗಿದ್ದ ಭಾರತವನ್ನು ಐದನೇ ಪ್ರಬಲ ರಾಷ್ಟ್ರ ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಈಗಾಗಲೇ ನಮ್ಮನ್ನಾಳಿದ ಇಂಗ್ಲೆಂಡ್ ದೇಶವನ್ನು ಹಿಂದಕ್ಕೆ ಹಾಕಿದ್ದೇವೆ ಇನ್ನು ಕೆಲವೇ ವರ್ಷಗಳಲ್ಲಿ ಅನೇಕ ರಾಷ್ಟ್ರಗಳನ್ನು ಹಿಂದಕ್ಕೆ ಕೊನೆಗೆ ಚೀನಾ ಮತ್ತು ಅಮೆರಿಕವನ್ನು ಸಹ ದಾಟಿ ವಿಶ್ವ ಗುರು ಸ್ಥಾನಕ್ಕೆ ಏರಲಿದ್ದೇವೆಇಂತಹ ವಿಷಯಗಳು ಸಿದ್ದರಾಮಯ್ಯಗೆ ಕೇಳುವುದಿಲ್ಲವೇ ವಿದೇಶಗಳಲ್ಲಿ ರಾಹುಲ್ ಗಾಂಧಿಗೆ ಏನು ಅನ್ನುತ್ತಾರೆ ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ, ಕಂಡ ಕಂಡಲ್ಲಿ ಬಾಂಬು ಇಡುವ ಭಯೋತ್ಪಾದಕರನ್ನು ಬ್ರದರ್ಸ್ ಎಂದು ಕರೆಯುವ ಕಾಂಗ್ರೆಸ್ ಪಕ್ಷ ದೇಶಕ್ಕೆ ಮಾರಕ ಎಂದು ತಮ್ಮ ವಾಗ್ಜರಿ ಹರಿಸಿದರು.

ಸಿರುಗುಪ್ಪ ಮಾಜಿ ಶಾಸಕ ಎಂಎಸ್ ಸೋಮಲಿಂಗಪ್ಪ, ಮಾಜಿ ಸಂಸದ ಶಿವರಾಮೇಗೌಡ, ಬಿಜೆಪಿ ಮುಖಂಡ ದರಪ್ಪ ನಾಯಕ, ಸಿಂಧನೂರು ಬಿಜೆಪಿ ಮುಖಂಡ ಕರಿಯಪ್ಪ, ತಾಲೂಕು ಅಧ್ಯಕ್ಷ ಕುಂಟ್ನಾಳ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿದರು. ಸಭೆಯಲ್ಲಿ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ  ಕೆ.ನಾಗೇಶಪ್ಪ ಮತ್ತು ಮಲ್ಲನಗೌಡ, ಮುಖಂಡ ಚಾಗಿ ಸುಬ್ಬಯ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಸೀತಾರಾಮರಾಜು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಮಂಜುಳಾ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ  ಮೇಕೇಲಿ ವೀರೇಶ ಪುರಸಭೆ ಮಾಜಿ ಅಧ್ಯಕ್ಷ ನಾಂಚಾರಯ್ಯ, ಬಿ.ಈರಣ್ಣ, ತೆಕ್ಕಲಕೋಟೆ ಪ.ಪಂ ಮಾಜಿ ಅಧ್ಯಕ್ಷಜಿ.ಸಿದ್ದಪ್ಪ,ನಗರಸಬವೆಸದಸ್ಯರಾದ ವಿಕ್ರಂ ಜೈನ್, ನಟರಾಜ, ರಾಮಕೃಷ್ಣ ಮೋಹನರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿತ್ತ ಹುಲಗಪ್ಪ, ಮಂಡಲ ಪ್ರ.ಕಾರ್ಯಗಳು ಬಿ. ಬಸವರಾಜ ಮತ್ತು ಪಕೀರಯ್ಯ ಸೇರಿದಂತೆ ಮಹಾಶಕ್ತಿ ಕೇಂದ್ರದ ಪ್ರಮುಖರು ಎಲ್ಲ ಮೋರ್ಚಾದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ