Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಳ್ಳಾರಿಯಲ್ಲಿ ಆ.1 ರಂದು ‘ವ್ಯಸನ ಮುಕ್ತ ದಿನಾಚರಣೆ' ಕಾರ್ಯಕ್ರಮ ಮತ್ತು ಜಾಗೃತಿ ಜಾಥಾ


ಬಳ್ಳಾರಿ,ಜು.30
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ಆಗಸ್ಟ್ 01 ರಂದು ಬೆಳಿಗ್ಗೆ 9:30 ಗಂಟೆಗೆ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಜಾಗೃತಿ ಜಾಥಾ:
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8.30 ಗಂಟೆಗೆ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ‘ಹೊಂಗಿರಣ'ದವರೆಗೆ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಬಳ್ಳಾರಿ ಲೋಕಸಭಾ ಸಂಸದ ಈ. ತುಕಾರಾಮ್, ಕೊಪ್ಪಳ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭಾ ಸಂಸದ ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ ಅಧ್ಯಕ್ಷ ಹಾಗೂ ಶಾಸಕರಾದ ಜೆ.ಎನ್. ಗಣೇಶ್, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಶಾಸಕರಾದ ಬಿ. ನಾಗೇಂದ್ರ, ಬಿ.ಎಮ್. ನಾಗರಾಜ್, ಈ. ಅನ್ನಪೂರ್ಣ, ವಿಧಾನಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ, ವೈ.ಎಮ್. ಸತೀಶ್, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್. ಆಂಜನೇಯಲು, ಕೆ.ಎಸ್.ಎಮ್.ಸಿ.ಎಲ್. ಉಪಾಧ್ಯಕ್ಷ ಹೆಚ್. ಲಕ್ಷö್ಮಣ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಳ್ಳಾರಿಯ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಂಭಾಷ ಅವರಿಂದ ವಿಶೇಷ ಉಪನ್ಯಾಸ ಇರಲಿದೆ. ಬಳ್ಳಾರಿಯ ಕುಮಾರಿ ತಸ್ಮಿಯ ಅನ್ನಪೂರ್ಣ ಅವರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ .ಕೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ .ಡಿ.ಪಿ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸೇರಿದಂತೆ ಇತರರು ಉಪಸ್ಥಿತರಿರುವರು.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ. ತುಕಾರಾಮ್ ರಾವ್ ಅವರು ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ