Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.24 ರಂದು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಿಲ್ಲಾ ಮಟ್ಟದ ಜಾಥಾ

ಬಳ್ಳಾರಿ,ಜು.22
ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಬಳ್ಳಾರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇವರ ಸಂಯುಕ್ತಾಶ್ರಯದಲ್ಲಿ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ರಾಘವ ಕಲಾಮಂದಿರದಲ್ಲಿ ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಸೈಬರ್ ಕ್ರೆöÊಂ, ಮಾದಕ ದ್ರವ್ಯ ಮುಕ್ತ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಟ್ಟದ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಎಸ್‌ಪಿ ಕಚೇರಿಯಿಂದ ಜಾಥಾ ನಡೆಯಲಿದ್ದು, ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ಧಲಿಂಗ ಪ್ರಭು ಚಾಲನೆ ನೀಡುವರು. ಬಳಿಕ ಬೆಳಿಗ್ಗೆ 11 ಗಂಟೆಗೆ ನಗರದ ರಾಘವ ಕಲಾಮಂದಿರದಲ್ಲಿ ಸಮಾವೇಶ ಕಾರ್ಯಕ್ರಮ ಉದ್ಘಾಟಿಸುವರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಭಾಗಿಯಾಗುವರು.
ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸುವರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹಾಗೂ ನೋಡಲ್ ಅಧಿಕಾರಿ ನವೀನ್ ಕುಮಾರ್ ಎನ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಬಳ್ಳಾರಿ ನಗರ ಡಿವೈಎಸ್‌ಪಿ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಗೋವಿಂದರಾಜುಲು ವಿ., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಿಂಧೆ ನಂದಿನಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತರಾವ್ ಎಂ.ವಿ., ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಶಿವಲೀಲಾ ಸೇರಿದಂತೆ ಮಕ್ಕಳು, ಯುವಕ-ಯುವತಿಯರು ಮತ್ತು ಸ್ವ-ಸಹಾಯ ಸಂಘದ ಮಹಿಳೆಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ