ಧಾರವಾಡ ಏ.22: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಿನ್ನೆ (ಏ.21) ಸಂಜೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಶ್ರೀ ಶಾರದಾ ಶಂಕರ ರಮಣ ಅದ್ವೈತ ಮಠದ ಪರಮಪೂಜ್ಯ ಶ್ರೀ ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಎಡಿಸಿ ಅವರಾದ ಗೀತಾ ಸಿ.ಡಿ. ಅವರು ಶ್ರೀ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಸ್ಕøತ ಮಹಾವಿದ್ಯಾಲಯದ ಸಹ ಉಪನ್ಯಾಸಕ ವಿದ್ವಾನ್ ಸೂರ್ಯನಾರಾಯಣ ಭಟ್, ಅವರು ಶ್ರೀ ಶಂಕರಾಚಾರ್ಯರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು. ಬ್ರಾಹ್ಮಣ ಸಮಾಜದ ಅಧ್ಯಕ್ಷ ಆರ್.ಡಿ. ಕಲುಕರ್ಣಿ, ಶಂಕರ ಕುಲಕರ್ಣಿ ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

