Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕು ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಪೂರೈಕೆಗೆ ಕ್ರಮ


ಬಳ್ಳಾರಿ,ಮೇ 26



ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಮಳೆಯು ರೈತ ಸಮುದಾಯದಲ್ಲಿ ಮಂದಹಾಸ ಮೂಡಿಸಿದೆ. ಇದಕ್ಕೆ ಪೂರಕವಾಗಿ ಕೃಷಿ ಇಲಾಖೆಯು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸಲು ಸಜ್ಜಾಗಿದೆ.

ಉತ್ತಮ ಮಳೆ ಹಿನ್ನಲೆ ರೈತರು ಕೃಷಿ ಭೂಮಿ ಹದಗೊಳಿಸುವ ಕಾರ್ಯಗಳಲ್ಲಿ ತೊಡಗಿದ್ದಾರೆ. ರಂಟೆ-ಕುAಟೆ ಹೊಡೆಯುವುದು, ರೋಟವೇಟರ್, ಎತ್ತುಗಳ ನೇಗಲು ಹೊಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ವಾರ್ಷಿಕ 599.5 ಮಿ.ಮೀ ವಾಡಿಕೆ ಮಳೆಯಿದ್ದು, ಕಳೆದ ವರ್ಷ ಮೇ 20 ರವರೆಗೆ 53.6 ಮಿ.ಮೀ ಮಳೆಯಾಗಿದೆ. ಪ್ರಸ್ತುತ ವರ್ಷ 88.4 ಮಿ.ಮೀ ಮಳೆಯಾಗಿ ಸುಮಾರು ಶೇ.64 ರಷ್ಟು ಮಳೆ ಹೆಚ್ಚಾಗಿ ಸುರಿದಿದೆ.

ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 1,63,753 ಹೆಕ್ಟೇರ್ ಪ್ರದೇಶ ಬಿತ್ತನೆಯಾಗುವ ಗುರಿ ಹೊಂದಿದ್ದು, ಭತ್ತ 89,000 ಹೆ., ಮೆಕ್ಕೆಜೋಳ 20,000 ಹೆ., ಹತ್ತಿ 35,000 ಹೆ., ತೊಗರಿ 4,500 ಹೆ., ಜೋಳ 5,000 ಹೆ., ಶೇಂಗ 2,500 ಹೆ., ತೃಣಧಾನ್ಯಗಳು 2,300 ಹೆ., ಸೂರ್ಯಕಾಂತಿ 1,000 ಹೆ., ಮತ್ತು ಕಬ್ಬು 1000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವ ನಿರೀಕ್ಷೆ ಹೊಂದಲಾಗಿದೆ.

ಕೃಷಿ ಇಲಾಖೆ ಜಿಲ್ಲೆಯ 13 ರೈತ ಸಂಪರ್ಕ ಕೇಂದ್ರ ಮತ್ತು 02 ಹೆಚ್ಚುವರಿ ಕೇಂದ್ರ ಸೇರಿ ಒಟ್ಟು 15 ಕೇಂದ್ರಗಳ ಮೂಲಕ ವಿವಿಧ ಬೆಳೆಯ ಬಿತ್ತನೆ ಬೀಜಗಳನ್ನು ಸಹಾಯಧನದಡಿ ವಿತರಿಸಲು ವ್ಯವಸ್ಥೆ ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ಸಮರ್ಪಕವಾಗಿದ್ದು, ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಆಭಾವದ ಬಗ್ಗೆ ಯಾವುದೇ ಅತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.

ಮುಂಗಾರು ಹಂಗಾಮಿಗೆ ಒಟ್ಟು 1,08,100 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಪ್ರಸ್ತುತ 40,228 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಹಂತ ಹಂತವಾಗಿ ಬೇಡಿಕೆ ಅನುಗುಣವಾಗಿ ಉಳಿದ ರಸಗೂಬ್ಬರ ಕಾಲಕಾಲಕ್ಕೆ ಸರಬರಾಜು ಆಗಲಿದೆ. ಜಿಲ್ಲೆಗೆ ಮುಂಗಾರು ಹಂಗಾಮಿನಲ್ಲಿ ಒಟ್ಟು 11766 ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, 11800 ಕ್ವಿಂಟಾಲ್ ಲಭ್ಯವಿದೆ.

ಜಿಲ್ಲೆಯಲ್ಲಿ ಕೃಷಿ ಪರಿಕರಗಳ ಪರಿವೀಕ್ಷರ ತಂಡಗಳನ್ನು ರಚಿಸಿ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಗುಣಮಟ್ಟ ಹಾಗೂ ಬೆಲೆ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ.

ಕೃಷಿ ಪರಿಕರ ಮಾರಾಟಗಾರರು ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನೇ ಮಾರಾಟ ಮಾಡಬೇಕು ತಪ್ಪಿದಲ್ಲಿ ಕಾನೂನು ರೀತ್ಯ ಕಠಿಣ ಕ್ರಮ ಜರುಗಿಸಲಾಗುವುದು.

*ರಸಗೊಬ್ಬರ ಬೇಡಿಕೆ (ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ) ಮತ್ತು ದಾಸ್ತಾನು (ಮೇ 20 ರಂತೆ):*

ಡಿಎಪಿ: 15,237 ಮೆಟ್ರಿಕ್ ಟನ್ ಬೇಡಿಕೆ ಇದ್ದು, 2735.9 ಮೆಟ್ರಿಕ್ ಟನ್ ದಾಸ್ತಾನಿದೆ.

ಎಂಒಪಿ: 2,293 ಮೆಟ್ರಿಕ್ ಟನ್ ಬೇಡಿಕೆ ಇದ್ದು, 2615.2 ಮೆಟ್ರಿಕ್ ಟನ್ ದಾಸ್ತಾನಿದೆ.

ಕಾಂಪ್ಲೆಕ್ಸ್: 45,580 ಮೆಟ್ರಿಕ್ ಟನ್ ಬೇಡಿಕೆ ಇದ್ದು, 20880.9 ಮೆಟ್ರಿಕ್ ಟನ್ ದಾಸ್ತಾನಿದೆ.

ಯೂರಿಯಾ: 44,350 ಮೆಟ್ರಿಕ್ ಟನ್ ಬೇಡಿಕೆ ಇದ್ದು, 13,491.8 ಮೆಟ್ರಿಕ್ ಟನ್ ದಾಸ್ತಾನಿದೆ.

ಎಸ್‌ಎಸ್‌ಪಿ: 542 ಮೆಟ್ರಿಕ್ ಟನ್ ಬೇಡಿಕೆ ಇದ್ದು, 504.2 ಮೆಟ್ರಿಕ್ ಟನ್ ದಾಸ್ತಾನಿದೆ.

ಒಟ್ಟು: 1,08,102 ಮೆಟ್ರಿಕ್ ಟನ್ ಬೇಡಿಕೆ ಇದ್ದು, 40228.3 ಮೆಟ್ರಿಕ್ ಟನ್ ದಾಸ್ತಾನಿದೆ.

*ಬಿತ್ತನೆ ಬೀಜ ಬೇಡಿಕೆ ಮತ್ತು ದಾಸ್ತಾನು:*

ಭತ್ತ: 4,000 ಕ್ವಿಂಟಾಲ್ ಬೇಡಿಕೆ ಇದ್ದು, 4,300 ಕ್ವಿಂಟಾಲ್ ದಾಸ್ತಾನಿದೆ.

ಮೆಕ್ಕೆಜೋಳ: 3,600 ಕ್ವಿಂಟಾಲ್ ಬೇಡಿಕೆ ಇದ್ದು, 4,000 ಕ್ವಿಂಟಾಲ್ ದಾಸ್ತಾನಿದೆ.

ತೊಗರಿ: 660 ಕ್ವಿಂಟಾಲ್ ಬೇಡಿಕೆ ಇದ್ದು, 660 ಕ್ವಿಂಟಾಲ್ ದಾಸ್ತಾನಿದೆ.

ನೆಲಕಡಲೆ: 2,800 ಕ್ವಿಂಟಾಲ್ ಬೇಡಿಕೆ ಇದ್ದು, 3,000 ಕ್ವಿಂಟಾಲ್ ದಾಸ್ತಾನಿದೆ.

ಜೋಳ: 210 ಕ್ವಿಂಟಾಲ್ ಬೇಡಿಕೆ ಇದ್ದು, 210 ಕ್ವಿಂಟಾಲ್ ದಾಸ್ತಾನಿದೆ.

ಒಟ್ಟು 11,766 ಕ್ವಿಂಟಾಲ್ ಬೇಡಿಕೆ ಇದ್ದು, 11,800 ಕ್ವಿಂಟಾಲ್ ದಾಸ್ತಾನಿದೆ.



ರೈತರು ಅಧಿಕೃತ ಪರಿಕರ ಮಾರಾಟಗಾರರಿಂದಲೇ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮತ್ತು ಇತರೆ ಕೃಷಿ ಪರಿಕರಗಳನ್ನು ಖರೀದಿಸಬೇಕು.

- ಟಿ.ಸೋಮಸುಂದರ್, ಜಂಟಿ ಕೃಷಿ ನಿರ್ದೇಶಕ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ