Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು ತೋಟಗಾರಿಕೆ ಬೆಳೆಗಳಿಗೆ ವಿಮಾ ನೊಂದಾಯಿಸಲು ಅವಕಾಶ.

ವಿಜಯನಗರ(ಹೊಸಪೇಟೆ), ಜು.02: 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯನ್ನು ಜಿಲ್ಲೆಯಲ್ಲಿ ಆಯ್ಕೆ ಮಾಡಲಾಗಿದ್ದು, ತೋಟಗಾರಿಕೆ ಬೆಳೆಗಾರರು ತಮ್ಮ ಬೆಳೆಗಳಿಗೆ ವಿಮೆ ನೊಂದಾಯಿಸಿಕೊಳ್ಳಲು ಗ್ರಾಮ ಓನ್ ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಜುಲೈ 31ರೊಳಗೆ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎಮ್.ರಮೇಶ ತಿಳಿಸಿದ್ದಾರೆ.
ತೋಟಗಾರಿಕೆ ಬೆಳೆಗಳಾದ ದಾಳಿಂಬೆ ಹಾಗೂ ಹಸಿ ಮೆಣಿಸಿನಕಾಯಿ ಬೆಳೆಗಳಿಗೆÀ ಬೆಳೆ ವಿಮೆ ಮಾಡಿಸಬಹುದಾಗಿದೆ. ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ : ಪ್ರತಿ ಹೆಕ್ಟೇರ್‌ಗೆ ದಾಳಿಂಬೆ ವಿಮಾ ಮೊತ್ತ ರೂ.1,27,000 ರೈತರ ವಿಮಾ ಕಂತು ಶೇ.5 ರಂತೆ 6,350 ಹಾಗೂ ಹಸಿ ಮೆಣಸಿನಕಾಯಿ ಬೆಳೆ ವಿಮಾ ಮೊತ್ತ ರೂ.71,000 ರೈತರ ವಿಮಾ ಕಂತು ಶೇ.5 ರಂತೆ 3,550 ಆಗಿದೆ. ಬೆಳೆ ವಿಮಾ ಮೊತ್ತವು ಬೆಳೆ ಸಾಲ ಪಡೆಯುವ ಮತ್ತು ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ, ಬೆಳೆ ವಿಮಾ ಮೊತ್ತವನ್ನು ಪಾವತಿಸಲು ಹತ್ತಿರದ ರಾಷ್ಟಿçÃಕೃತ ಬ್ಯಾಂಕ್ ಶಾಖೆಗಳಲ್ಲಿ ಸಹಕಾರಿ ಸಂಘಗಳನ್ನು ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಅಗತ್ಯ ದಾಖಲಾತಿ ವಿವರ : ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಸಂಖ್ಯೆ ಹಾಗೂ ಸ್ವಯಂ ಘೋಷಿತ ಬೆಳೆ ವಿವರಗಳನ್ನು ನೀಡತಕ್ಕದ್ದು. ಕಂಪನಿಯ ಪ್ರತಿನಿಧಿಯನ್ನು ಸಂಪರ್ಕಿಸಲು ಮೊ.7406490045 ಗೆ ಕರೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಹೊಸಪೇಟೆ ಮೊ.9164297220, ಮರಿಯಮ್ಮನಹಳ್ಳಿ ಮೊ.7204888978, ಕಮಲಾಪುರ ಮೊ.8123465548 ಹಾಗೂ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಹೊಸಪೇಟೆ ಮೊ.8310291867 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ