Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ





ಬಳ್ಳಾರಿ,ಜ.27

ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರ್ ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು ಕ್ರೀಡೆ, ಸಂಗೀತ, ನೃತ್ಯ ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಅಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆ.20 ರೊಳಗಾಗಿ ಧಾರವಾಡ ಜಿಲ್ಲೆಯ ಲಕಮ್ಮನಹಳ್ಳಿಯ ಕೆಹೆಚ್‌ಬಿ ಕಾಲೋನಿಯ ಚಂದ್ರಕಾ ಲೇಔಟ್ ಹಿಂಭಾಗದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿ ಕಚೇರಿ, ಅಂಚೆ ವಿಳಾಸ-580004 ಕ್ಕೆ ಸಲ್ಲಿಸುವುದು.

ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಅರ್ಜಿಗಳನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಧಾರವಾಡ ಜಿಲ್ಲೆಯ ಕರ್ನಾಟಕ ಬಾಲವಿಕಾಸ ಅಕಾಡೆಮಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ