Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಚೆ ಇಲಾಖೆ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ


ಬuಳ್ಳಾರಿ,



ಅಂಚೆ ಇಲಾಖೆ ವತಿಯಿಂದ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.

ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸವನ್ನು ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು.

ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಾಭಿರುಚಿಯ ಅರೋಗ್ಯ ಪೂರ್ಣ ಜ್ಞಾನಧಾರಿತ ಹವ್ಯಾಸ ರೂಢಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ.

*ಅರ್ಹತೆ:*

2023-24ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆ ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್‌ನಲ್ಲಿ ಸದಸ್ಯರಾಗಿರಬೇಕು.

ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ರೂ.6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಸೆ.03 ಕೊನೆಯ ದಿನವಾಗಿದೆ.

ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ತಿತಿತಿ.iಟಿಜiಚಿಠಿosಣ.gov.iಟಿ ಅಥವಾ ತಿತಿತಿ.ಞಚಿಡಿಟಿಚಿಣಚಿಞಚಿಠಿosಣ.gov.iಟಿ ಗೆ ಭೇಟಿ ನೀಡಬಹುದು. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊ.9880979730, 9480722701 ಹಾಗೂ ದೂ.08392-266037 ಗೆ ಸಂಪಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ