Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜು, 15: ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರೋಗದಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಆದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿಗಳ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಒಟ್ಟು 18 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿಪ್ಲೋಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆ ಪಡೆದಿರಬೇಕು.
ಫಾರ್ಮಸಿ ಅಧಿಕಾರಿಗಳು : ಒಟ್ಟು 24 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್‌ನಲ್ಲಿ ನೋಂದಣಿಯಾಗಿರಬೇಕು.
ಅರ್ಹ ಅಭ್ಯರ್ಥಿಗಳು ದಿನಾಂಕ 16-07-2026 ರ ಬೆಳಿಗ್ಗೆ 10:30 ರಿಂದ ದಿನಾಂಕ 25-07-2026 ರ ಸಂಜೆ 5:30 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಈ ಎರಡು ಹುದ್ದೆಗಳಿಗೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಕಚೇರಿ ಅವಧಿಯಲ್ಲಿ 'ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ' ಇಲ್ಲಿ ಪಡೆದುಕೊಳ್ಳಲು ಸೂಚಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-222382 ಅಥವಾ ಇಮೇಲ್ ಐಡಿ: [email protected] ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ