ಶಿವಮೊಗ್ಗ, ಜೂನ್ 19 ತೋಟಗಾರಿಕೆ ಇಲಾಖೆಯು 2026-27ನೇ ಸಾಲಿಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ, ಕೃಷಿ ಯಾಂತ್ರೀಕರಣ ಉಪಯೋಜನೆ, VBGRAMG, RKVY, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ರೈತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿAದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ಸಮಯದಲ್ಲಿ ಸಲ್ಲಿಸುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -08182-279415/ 9980009438, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/ 8310662972, ಸೊರಬ - 08184-295112 /9663634388, ಸಾಗರ-08183-295124/ 9900903393, ಹೊಸನಗರ – 08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು
