Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ





ಬೆಳಗಾವಿ ಡಿ.15: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿಗೆ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 02 ಮತ್ತು ಪರಿಶಿಷ್ಟ ಪಂಗಡದ 01 ಅಭ್ಯರ್ಥಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.



ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಒಳಗಿರಬೇಕು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಯಾವುದೇ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.



2025 ರ ಡಿಸೆಂಬರ್ 24 ರೊಳಗೆ ಅರ್ಜಿಸಲ್ಲಿಸಬೇಕು. ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ವಾರ್ತಾ ಭವನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಳಗಾವಿ ಇಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ.



ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಮೊ.ನಂ.9480841233 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ