ಬಳ್ಳಾರಿ,ಡಿ.17
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ನಡೆಯುವ “ಅಂತರಾಷ್ಟಿಯ ಮಹಿಳಾ ದಿನಾಚರಣೆ” ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಚಲಿತ ವಿದ್ಯಮಾನಗಳಿಂದ ಮಹಿಳಾ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿರುವ0ತಹ ಹಾಗೂ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡ0ತಹ ಮತ್ತು ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ “ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ” ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಈ ವಿವಿಧ ಕ್ಷೇತ್ರಗಳಲ್ಲದೇ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆöÊರ್ಯದಿಂದ ಹೋರಾಡಿ ಜೀವಪಾಯದಿಂದ ಪಾರು ಮಾಡಿದಂತಹ ಮಹಿಳೆಗೆ “ವೀರಮಹಿಳೆ” ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದೆ.
ಅರ್ಹ ಮಹಿಳೆಯರು ನಿಗದಿತ ನಮೂನೆ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ನಗರದ ಎಸ್‌ಪಿ ವೃತ್ತದ ಹತ್ತಿರ ದೇವಿನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿದೆ.
*ಷರತ್ತುಗಳು:*
18 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ವೀರ ಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ಈ ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಈ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 01 ರಿಂದ ಡಿಸೆಂಬರ್ 31ರ ಒಳಗೆ ಇರಬೇಕು.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

