ಧಾರವಾಡ ಮಾ.14: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಮ್ಮ ಕ್ಲಿನಿಕ್ ಹಾಗೂ ಮೊಬೈಲ್ ಹೆಲ್ತ್ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಗಳ ನೇಮಕಾತಿ ಮಾಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಳನ್ನು ಭರ್ತಿ ಮಾಡಲು https://dharwad.nic.in ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಧಾರವಾಡಗೆ ಸಂಪರ್ಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

