Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾತ್ಕಾಲಿಕ ವೈದ್ಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಜು.19  ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಸಮಾಲೋಚನೆ ಅಧಾರದಲ್ಲಿ 2025 ರ ಮಾರ್ಚ್ 31 ರವರೆಗೆ ಹಾಗೂ 2025-26 ನೇ ಸಾಲಿನ ಪಿ.ಐ.ಪಿ ಅನುಮೋದನೆ ನಿರೀಕ್ಷಿಸಿ ತಾತ್ಕಾಲಿಕ ನೇಮಕಾತಿ ಮಾಡಲು ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಹುದ್ದೆಯ ವಿವರ: ಸ್ತ್ರೀ ರೋಗ ತಜ್ಞರು ಹುದ್ದೆ-4, ಮೂಳೆ ಮತ್ತು ಕೀಲು ತಜ್ಞರು ಹುದ್ದೆ-4, ಶಸ್ತ್ರ ಚಿಕಿತ್ಸಾ ತಜ್ಞರು ಹುದ್ದೆ-4, ಮಕ್ಕಳ ತಜ್ಞರು ಹುದ್ದೆ-4, ಚರ್ಮ ರೋಗ ತಜ್ಞರು ಹುದ್ದೆ-4, ಫಿಜಿಷಿಯನ್ ಹುದ್ದೆ-4 ಮನರೋಗ ತಜ್ಞರು ಹುದ್ದೆ-4, ಕಿವಿ, ಮೂಗು ಮತ್ತು ಗಂಟಲು ತಜ್ಞರು ಹುದ್ದೆ-4

ತಜ್ಞ ವೈದ್ಯರು ಗರಿಷ್ಠ 70 ವರ್ಷ ವಯೋಮಾನದವರಾಗಿರಬೇಕು. ಅರ್ಜಿಗಳನ್ನು ಜುಲೈ 30 ರಂದು ಬೆಳಗ್ಗೆ 10 ರಿಂದ 2 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತೆ, ದಾವಣಗೆರೆ ಎಸ್.ಎಸ್.ಆಸ್ಪತ್ರೆ ಹಿಂಬಾಗ, ಎನ್.ಸಿ.ಸಿ.ಕ್ಯಾಂಪ್ ಪಕ್ಕ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಇದೇ ದಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಸಂಜೆ 5-00 ಗಂಟೆಗೆಯೊಳಗೆ ಕಚೇರಿಗೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ 9449843195 ಗೆ ಸಂಪರ್ಕಿಸಲು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ