Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರಿವು ಸಾಲ ಯೋಜನೆಯಡಿ ಅರ್ಜಿ ಆಹ್ವಾನ



ಕೊಪ್ಪಳ ನವೆಂಬರ್ 05  : 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕೊಪ್ಪಳ ಜಿಲ್ಲೆ ವತಿಯಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ನೀಟ್, ಡಿ.ಸಿ.ಇ.ಟಿ, ಪಿ.ಜಿ. ಸಿ.ಇ.ಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (MBBS, MD, MS) , ದಂತ ವೈದ್ಯಕೀಯ(BDS, MDS ), ಆಯುಷ್ (B.Ayush, M.Ayush ), ಇಂಜಿನಿಯರಿAಗ್ & ಟೆಕ್ನಾಲಜಿ (ಃ.ಇ/ ಃ.ಖಿeಛಿh/ ಒ.ಇ/ ಒ.ಖಿeಛಿh), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (B.Arch/ M.Arch) MBA, MCA, LLB,, B.Sc in Horticulture, Agricultural Engg, Dairy Technology, Forestry,Veternary and Animal Sciences, Fisheries, Sericulture. Home/ Community Sciences, Food Nutrition and Dietetics, B.Pharma, M.Pharma, Pharma.D, AndD.Pharma ಗಳಲ್ಲಿ ಆಯ್ಕೆಯಾದಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟನ್ನು ಪಾವತಿಸಬೇಕಾಗಿರುತ್ತದೆ. (ಶೇ.12 ರಷ್ಟು ಮೊತ್ತವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು). ಅರ್ಜಿಯನ್ನು ವೆಬ್ ಸೈಟ್: kmdconline.karnataka.gov.in ಮೂಲಕ ಡಿಸೆಂಬರ್ 3 ರೊಳಗೆ ಸಲ್ಲಿಸಬೇಕು.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ್ ಭವನ, ಹೊಸಪೇಟೆ ರಸ್ತೆ ಕೊಪ್ಪಳ–583231. ದೂರವಾಣಿ ಸಂಖ್ಯೆ; 08539-225008 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ