Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಹೊಸದಾಗಿ ನ್ಯಾಯಬೆಲೆ ಅಂಗಡಿ ಆರಂಭಿಸಲು ಅರ್ಜಿ ಆಹ್ವಾನ





ಬಳ್ಳಾರಿ,ನ.15

ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ರೈಲ್ವೆ ಗೇಟ್ ಬಳಿಯ ಆಂಜನೇಯ ದೇವಸ್ಥಾನದ ಹತ್ತಿರ ಪಡಿತರ ಚೀಟಿದಾರರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ ಪರಿಣಾಮಕಾರಿಗೊಳಿಸುವ ಹಿತದೃಷ್ಟಿಯಿಂದ ಈ ಪ್ರದೇಶದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಉದ್ದೇಶಿಸಲಾಗಿದ್ದು, ನಿಗಧಿತ ನಮೂನೆ-ಎ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ನಗರದ ನೂತನ ಜಿಲ್ಲಾಡಳಿತ ಭವನದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನದಿಂದ 30 ದಿನಗಳೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.

ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನ್ಯಾಯಬೆಲೆ ಅಂಗಡಿಯನ್ನು ಮಂಜೂರು ಮಾಡುವಾಗ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2018ರ ಆದ್ಯತೆಗಳನ್ನು ಪರಿಗಣಿಸಲಾಗುವುದು.

*ವಿವರ:*

ಬಳ್ಳಾರಿ ನಗರದ ಗುಗ್ಗರಹಟ್ಟಿ ಪಟ್ಟಣ ಪ್ರದೇಶದ ಆಂಜನೇಯ ಗುಡಿ ಹತ್ತಿರದ ವೆಂಕಟಮ್ಮ ಕಾಲೋನಿ ಸೇರ್ಪಡೆಗೊಳ್ಳುವ ಪ್ರದೇಶವಾಗಿದ್ದು, ಒಟ್ಟು 2693 ಪಡಿತರ ಚೀಟಿಗಳಲ್ಲಿ ಅಂದಾಜು 850 ಪಡಿತರ ಚೀಟಿ ನಿಯೋಜನೆ, 1843 ನಿಯೋಜನೆ ನಂತರ ಉಳಿಯುವ ಪಡಿತರ ಚೀಟಿಗಳು.

ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ, ಸಂಸ್ಥೆ, ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಅದರಂತೆ ಸಹಕಾರ ಸಂಘಗಳಾದ ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ (ನಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್., ತೋಟಗಾರಿಕೆ ಉತ್ಪನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿಧೋದ್ದೇಶ ಸಹಕಾರ ಸಂಘ, ನೋಂದಾಯಿತ ನೇಕಾರರ ಸಹಕಾರ ಸಂಘ, ನೋಂದಾಯಿತ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳು, ನೋಂದಾಯಿತ ವಿವಿಧೋದ್ದೇಶ ಸಹಕಾರ ಸಂಘಗಳು. ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿAದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್ ಮತ್ತು ವಿಕಲಚೇತನರು (ಸರ್ಕಾರ ನಿಯಮಾನುಸಾರ), ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಹಕಾರ ಸಂಘಗಳು ಕನಿಷ್ಠ ಮೂರು ವರ್ಷದ ಹಿಂದೆ ನೋಂದಾಯಿಸಿರಬೇಕು ಮತ್ತು ಮೂರು ವರ್ಷಗಳಿಂದ ನಿರಂತರ ಚಟುವಟಿಕೆಯಲ್ಲಿದ್ದು, ಎರಡು ವರ್ಷಗಳಿಂದ ಕನಿಷ್ಠ ಎರಡು ಲಕ್ಷ ರೂ. ಮೊತ್ತದ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು ಹಾಗೂ ಇತ್ತೀಚಿನ ಮೂರು ವರ್ಷಗಳ ಆಡಿಟ್ ವರದಿ ಸಲ್ಲಿಸಬೇಕು.

*ಬೇಕಾದ ಕಡ್ಡಾಯ ದಾಖಲೆ:*

ಅರ್ಜಿ ನಮೂನೆ 'ಎ', ಅಭ್ಯರ್ಥಿಯ ಎಸ್.ಎಸ್.ಎಲ್.ಸಿ ಅಂಕಪಟ್ಟಿ (ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು). ಸಹಕಾರ ಸಂಘ, ಸಂಸ್ಥೆಗಳ ಮತ್ತು ಸ್ವ-ಸಹಾಯ ಸಂಘಗಳಾದರೆ ನೋಂದಾವಣಿ ಪತ್ರ, ಸಹಕಾರ ಸಂಘ, ಸಂಸ್ಥೆಯಾದರೆ ಕಳೆದ 3 ವರ್ಷಗಳ ದೃಢೀಕೃತ ಲೆಕ್ಕ ಪರಿಶೋಧನಾ ವರದಿ, ಸಹಕಾರ ಸಂಘ, ಸಂಸ್ಥೆಗಳ ಉಪನಿಯಮಗಳು (ಬೈಲಾ).

ಸಹಕಾರ ಸಂಘ, ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ, ಸಹಕಾರ ಸಂಘ, ಸಂಸ್ಥೆಗಳ ಪರವಾಗಿ ನ್ಯಾಯಬೆಲೆ ಅಂಗಡಿ ನಡೆಸಲು ಮತ್ತು ಪ್ರಮಾಣ ಪತ್ರ ಸಲ್ಲಿಸಲು ಅಧಿಕಾರ ಪಡೆದಿರುವ ಪ್ರತಿನಿಧಿಯನ್ನು ನೇಮಿಸಿರುವ ಬಗ್ಗೆ ನಡವಳಿ ಪತ್ರದ ಪ್ರತಿ.

ಕರ್ನಾಟಕ ಸೊಸೈಟೀಸ್ ರಿಜಿಸ್ಟೆçÃಷನ್ ಆಕ್ಟ್ 1959 ಅಡಿ ವಿಚಾರಣೆ, ಟ್ರಯಲ್ ಮತ್ತು ಲಿಕ್ವಿಡೇಷನ್, ನಡವಳಿ ನಡೆದಿರುವುದಿಲ್ಲ ಎಂಬ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಢೀಕರಣ ಪತ್ರ, ವ್ಯಾಪಾರದ ಮಳಿಗೆಯ ಖಾತೆ ಅಥವಾ ಬಾಡಿಗೆ, ಕರಾರು ಪತ್ರ. ಹಣಕಾಸು ಹೊಂದಿರುವ ಬಗ್ಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ. ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ವಾಸ ಸ್ಥಳ ಪ್ರಮಾಣ ಪತ್ರ. ಅರ್ಜಿದಾರರ, ಸಂಘದ ಅಧ್ಯಕ್ಷ, ಕಾರ್ಯದರ್ಶಿಗಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಾಗದಿರುವ ಬಗ್ಗೆ ಅಫಿಡೇವಿಟ್.

ಅರ್ಜಿಯ ಜೊತೆ ಮೇಲ್ಕಂಡ ಎಲ್ಲಾ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ ನಿಗಧಿತ ದಿನಾಂಕದೊಳಗಾಗಿ ಉಪ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, (ಬಳ್ಳಾರಿ ನೂತನ ಜಿಲ್ಲಾಡಳಿತ ಭವನ, ಅನಂತಪುರ ರಸ್ತೆ) ಬಳ್ಳಾರಿ ಇವರಿಗೆ ಸಲ್ಲಿಸಬೇಕು.

ಅರ್ಜಿಯ ಜೊತೆ ಮೇಲ್ಕಂಡ ದಾಖಲೆಗಳನ್ನು ಸಲ್ಲಿಸದ, ಅಪೂರ್ಣವಾಗಿರುವ ಮತ್ತು ನಿಗಧಿತ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಮೇಲ್ಕಂಡ ಆದ್ಯತೆ ಹೊರತುಪಡಿಸಿ ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಯಾವುದೇ ವೈಯಕ್ತಿಕ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ