Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಿಪಿಕ ಸಿಬ್ಬಂದಿ ನೇಮಕಾತಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ


ಶಿವಮೊಗ್ಗ, ನವೆಂಬರ್ 21ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಈ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಓರ್ವ ಮಾಜಿ ಸೈನಿಕರನ್ನು ಲಿಪಿಕ ಸಿಬ್ಬಂದಿಯಾಗಿ ಲಿಖಿತ ಪರೀಕ್ಷೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿಯು ಸಂಪೂರ್ಣ ತಾತ್ಕಾಲಿಕವಾಗಿದ್ದು, 60 ವರ್ಷಗಳ ವಯೋಮಿತಿ ಮೀರದ ಮಾಜಿ ಸೈನಿಕರಿಗೆ ಮೀಸಲಾಗಿರುತ್ತದೆ. ಈ ನೇಮಕಾತಿಯು ಸರ್ಕಾರದ ಖಾಯಂ ಹುದ್ದೆಗೆ ಸಮನಾಗಿರುವುದಿಲ್ಲ ಮತ್ತು ಸೇವಾ ಖಾಯಮಾತಿಗೆ ಅವಕಾಶವಿರುವುದಿಲ್ಲ. ಸೇನಾಸೇವೆಯ ನಿವೃತ್ತಿ ನಂತರ ಕೇಂದ್ರ/ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಲಿಪಿಕ ನೌಕರರಾಗಿ ಖಾಯಂ/ಹoಗಾಮಿಯಾಗಿ ಕಾರ್ಯ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಕನ್ನಡ, ಹಿಂದಿ ಮತ್ತು ಆಂಗ್ಲಭಾಷೆಗಳಲ್ಲಿ ಸಂವಹನವು (ಬರೆಯಲು, ಓದಲು ಮತ್ತು ಮಾತನಾಡಲು) ಮತ್ತು ಗಣಕ ಯಂತ್ರದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಪ್ರಾವೀಣ್ಯತೆಯು ಅತ್ಯಗತ್ಯವಾಗಿರುತ್ತದೆ.

ಆಸಕ್ತರು ದಿನಾಂಕ 05.12.2025 ರ ಸಂಜೆ 5.00 ಗಂಟೆಯ ಒಳಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಪೂರ್ಣ ಸ್ವವಿವರಗಳೊಂದಿಗೆ ತಮ್ಮ ಸ್ವಹಸ್ತಾಕ್ಷರದಲ್ಲಿ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08182220925 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ