Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ





ಬೆಂಗಳೂರು, ಆಗಸ್ಟ್ 04  ರಾಜ್ಯ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ 2025-26ರ ಸಾಲಿಗೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಅಪ್ರೆಂಟಿಸ್ ಟೆಕ್ನಿಶಿಯನ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.



ಅರ್ಜಿ ಸಲ್ಲಿಸಲು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಡಿಪ್ಲೋಮಾ ಪಡೆದಿರಬೇಕು. ನಿಗಧಿತ ವಿದ್ಯಾರ್ಹತೆಯನ್ನು 2023 ಮೇ ತಿಂಗಳ ನಂತರ ಪಡೆದವರು ಮಾತ್ರ ತರಬೇತಿಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳನ್ನು ಅವರು ಗಳಿಸಿದ ಅಂಕಗಳ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು.



ಈಗಾಗಲೇ ಅಪ್ರೆಂಟಿಸ್ ಪಡೆದವರಾಗಿದ್ದರೆ ಅಂತಹವರು ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ತರಬೇತಿಯ ಅವಧಿಯಲ್ಲಿ ಮಾಹೆಯಾನ ರೂ. 8,000/- ಪಾವತಿಸಲಾಗುತ್ತದೆ. (ರೂ. 4000/- ಗಳನ್ನು ರಾಜ್ಯ ಸರ್ಕಾರದಿಂದ ಹಾಗೂ ರೂ. 4000 ಗಳನ್ನು ಅಪ್ರೆಂಟಿಸ್ ಬೋರ್ಡ್ರವರಿಂದ ನೇರವಾಗಿ ಟ್ರೈನಿಗಳ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಲಾಗುತ್ತದೆ).



ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ, ಸಚಿವಾಲಯ ಗ್ರಂಥಾಲಯ, ಕೊಠಡಿ ಸಂಖ್ಯೆ - 21 ನೆಲಮಹಡಿ, ವಿಧಾನಸೌಧ, ಬೆಂಗಳೂರು- 560 001. ಇವರಿಗೆ ಸೆಪ್ಟೆಂಬರ್ 10 ರ ಒಳಗಾಗಿ ತಲುವುವಂತೆ ಸಲ್ಲಿಸತಕ್ಕದ್ದು. ಅರ್ಜಿಯೊಂದಿಗೆ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ಐ.ಡಿ ಮುಂತಾದ ವಿವರಗಳೊಂದಿಗೆ ಸಲ್ಲಿಸುವುದು. ಅರ್ಜಿಯೊಂದಿಗೆ ದೃಢೀಕರಿಸಲಾಗಿರುವ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು, ಲೈಬ್ರರಿ ಅಂಡ್ ಇನ್ಫರ್ಮೇಷನ್ ಸೈನ್ಸ್ನಲ್ಲಿ ಡಿಪ್ಲೋಮಾ ಹೊಂದಿರುವ ಬಗ್ಗೆ ಪ್ರಮಾಣಪತ್ರ / ತಾತ್ಕಾಲಿಕ ಪ್ರಮಾಣ ಪತ್ರ (Provisional Certificate) ಗಳನ್ನು ಕಡ್ಡಾಯವಾಗಿ ಲಗತ್ತಿಸುವುದು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.



ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-22033462/4144 ಅಥವಾ ಇ-ಮೇಲ್ ವಿಳಾಸ [email protected] ಕ್ಕೆ ಸಂಪರ್ಕಿಸಬಹುದು ಎಂದು ಸಚಿವಾಲಯ ಗ್ರಂಥಾಲಯದ ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಗಳಾದ ಜ್ಯೋತಿಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ