Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ನೀಡುವ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ‘ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ' ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000/- ರೂ. ಗಳ ಸ್ಟೆöÊಫೆಂಡ್ ನೀಡಲಾಗುವುದು. ತರಬೇತಿಯು 2025 ರ ಜನವರಿಯಿಂದ ಡಿಸೆಂಬರ್ ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.
ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್ 08 ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಹಿಂದುಗಡೆ, (ರೈಲ್ವೆ ಸ್ಟೇಷನ್ ಎದುರು), ಬಳ್ಳಾರಿ ಅಥವಾ ಮೊ.9740116585 ಗೆ ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ತುಕಾರಾಂರಾವ್ ಬಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ