Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಶಿಕ್ಷಣ ಸುದ್ದಿ

ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಮಡಿಕೇರಿ ಜೂ.26-ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಜುಲೈ, 31 ರವರೆಗೆ ಇಲಾಖಾ ವೆಬ್‍ಸ್ಯಟ್ www.sw.kar.nic.in ಹಾಗೂ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 3 ಅಥವಾ 5 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು.

ತರಬೇತಿ ಅವಧಿಯು 2 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರಗಳಿಗೆ ಶಿಷ್ಯವೇತನವನ್ನು ನೀಡಲಾಗುವುದು. ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ಮೀರತಕ್ಕದ್ದಲ್ಲ. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿ ಪಡಿಸಲಾಗುವುದು. ಅಂತರ್ಹ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ.10ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.

ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 3 ವರ್ಷದೊಳಗೆ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ನೀಡಬೇಕು. ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ಶಿಷ್ಯವೇತನವನ್ನು ತಡೆಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯರ್ಥಿಗಲಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in(ಪರಿಶಿಷ್ಟ ಜಾತಿ) ಹಾಗೂ www.tw.kar.nic.in (ಪರಿಶಿಷ್ಟ ಪಂಗಡ) ನಲ್ಲಿ ಜುಲೈ, 31 ರವರೆಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ.ಸಂ.9480843155 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ