Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿ: ಡಾ: ಕುಮಾರ


ಮಳವಳ್ಳಿ ತಾಲ್ಲೂಕಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ ನಂತರ ಶೈಕ್ಷಣಿಕ ವರ್ಷದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.



ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಮೇಘಲಾಯ‌ ರಾಜ್ಯದ 22 ವಿದ್ಯಾರ್ಥಿಗಳು 1 ರಿಂದ 9 ನೇ ತರಗತಿಯೊಳಗಿದ್ದು, ಗುಣಮುಖರಾದ ನಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಲಾಗುವುದು.‌ ಬಾಲಮಂದಿರದಲ್ಲಿ ಅವರಿಗೆ ವಾಸ್ತವ್ಯ ಹಾಗೂ ವೈದ್ಯರ ಸಲಹೆಯಂತೆ ಆಹಾರ ಒದಗಿಸಲಾಗುವುದು ಎಂದರು.



ಶಿಕ್ಷಣ ಇಲಾಖೆ ಅವರು ಮೇಘಾಲಯ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸ್ಥಳೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಬೇಕು. ಇದಲ್ಲದೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವೈದ್ಯರ ಸಲಹೆ ಹಾಗೂ ಪೋಷಕರ ಒಪ್ಪಿಗೆ ಪಡೆದು ಪರೀಕ್ಷೆ -1 ಬರೆಯಲಿ ಇಲ್ಲವಾದಲ್ಲಿ ಪರೀಕ್ಷೆ-2 ಬರೆಯಲು ವ್ಯವಸ್ಥೆ ಮಾಡಿ ಎಂದರು.



ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಿದ ನಂತರ ಮೇಘಾಲಯ ಸರ್ಕಾರ ನಿಯೋಜಿಸಿರುವ ಅಧಿಕಾರಿಗಳು ಮಕ್ಕಳ ಪೋಷಕರನ್ನು ಅವರ ಆಧಾರ್ ಕಾಡ್೯ ಗುರುತಿನ ಚೀಟಿಯೊಂದಿಗೆ ಆಗಮಿಸಿ ಮಕ್ಕಳ ರಕ್ಷಣಾ ಘಟಕಕ್ಕೆ ಪತ್ರ ನೀಡಿ ನಂತರ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಇದಲ್ಲದೇ ಮೇಘಾಲಯ ರಾಜ್ಯದ ವಿದ್ಯಾರ್ಥಿಗಳನ್ನು ಗೋಕುಲ ಶಾಲೆಗೆ ದಾಖಲೆ ಮಾಡುವ ಸಂದರ್ಭದಲ್ಲಿ ನೀಡಿರುವ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುವಂತೆ ತಿಳಿಸಿದರು.



*ಪೋಷಕರ ಸಭೆ ಹಾಗೂ ಪರೀಕ್ಷೆ ನಡೆಸಿ* ಶೈಕ್ಷಣಿಕ ಸಾಲು ಅಂತ್ಯವಾಗುತ್ತಿದ್ದು, ಗೋಕಲ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತಂದು ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿ, ಅಗತ್ಯವಿದ್ದಲ್ಲಿ ಶಿಕ್ಷಣ ಇಲಾಖೆಯಿಂದಲೂ ಸಿಬ್ಬಂದಿ ನಿಯೋಜಿಸಿ. ಇನ್ನೊಂದು ಭಾಗದಲ್ಲಿ ಶಾಲೆಗೆ ನೋಟೀಸ್ ನೀಡುವ ಕೆಲಸ ನಡೆಯುತಿರಲಿ ಎಂದರು.



*ಜಿಲ್ಲೆಯ ವಸತಿ ಶಾಲೆಗಳ ಪರಿಶೀಲನೆ* ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ವ್ಯವಸ್ಥೆಗಳು, ಮಕ್ಕಳಿಗೆ ನೀಡಲಾಗುತ್ತಿರುವ ಆಹಾರ ಕುರಿತು ವರದಿ ನೀಡಲು ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಮಿತಿ ರಚಿಸಲಾಗುವುದು ಎಂದರು.



ಸರ್ಕಾರದ ಆಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ‌ ಹೊರಗಿನ ವ್ಯಕ್ತಿ ಹಾಗೂ ಸಂಸ್ಥೆಯಿಂದ ಆಹಾರ ಪಡೆಯುವಂತಿಲ್ಲ. ಯಾವುದಾದರೂ ದೂರು ಬಂದಲ್ಲಿ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.



*ನೋಡಲ್ ಅಧಿಕಾರಿಗಳ ನೇಮಕ* ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ‌ ಮಾಡಲಾಗುವುದು ಎಂದರು.



ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು‌ ಮಾತನಾಡಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ಊಟದ ಸಂದರ್ಭದಲ್ಲಿ ಬೇರೆ ದಾನಿಗಳು ಆಹಾರ ನೀಡುವುದಾಗಿ ತಿಳಿಸುವುದು ಶಾಲೆ ಅವರನ್ನು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಶಿಸ್ತು ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.



ಗೋಕುಲ ವಿದ್ಯಾಸಂಸ್ಥೆಗೆ ಪರವಾನಗಿ ನೀಡುವಾಗ ಅಥವಾ ನವೀಕರಣ ಮಾಡುವ ಸಂದರ್ಭದಲ್ಲಿ ಪರಿಶೀಲನೆ ಮಾಡಿದ ಅಧಿಕಾರಿಯ ವಿವರವನ್ನು ಒದಗಿಸುವಂತೆ ತಿಳಿಸಿದರು.



ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪರವಾನಗಿ ನವೀಕರಣ ಅಥವಾ ಪರವಾನಗಿ ನೀಡುವ ಸಂದರ್ಭದಲ್ಲಿ‌ ಸರ್ಕಾರದ ಮಾರ್ಗಸೂಚಿಯಂತೆ ಪರಿಶೀಲನೆ ಕಟ್ಟುನಿಟ್ಟಾಗಿ ‌ನಡೆಸಬೇಕು ಎಂದರು.



ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಅವರು ಮಾತನಾಡಿ ಮಕ್ಕಳ ಆರೋಗ್ಯದ ಮೇಲೆ ಈಗಾಗಲೇ ನಿಗಾ ವಹಿಸಲು ಸಿಬ್ಬಂದಿಗಳನ್ನು ಮಿಮ್ಸ್ ಗೆ ನಿಯೋಜಿಸಲಾಗಿದೆ. ಬಾಲಕರ ಬಾಲಮಂದಿರದಲ್ಲಿ ಸ್ಥಳಾವಕಾಶ ಕಡಿಮೆಯಾಗುವುದರಿಂದ ಬಾಲಮಂದಿರದ ಪಕ್ಕದ ಕಟ್ಟಡದಲ್ಲಿ ಮಕ್ಕಳಿಗೆ ಬೇಕಿರುವ ವ್ಯವಸ್ಥೆಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.



ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೇಘಾಲಯ ರಾಜ್ಯದ ಶಿಕ್ಷಣ ಇಲಾಖೆಯ ಪೀಟರ್ ಸುನ್, ರುಡಿ ಕ್ರಿಯಲ್, ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ಸುಮಿತ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ