Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧೆಡೆ ದಾಳಿ: 02 ಬಾಲಕಾರ್ಮಿಕರ ರಕ್ಷಣೆ


ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ ನಡೆಸಿ ಇಬ್ಬರು ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ತಿಳಿಸಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್ಲೈನ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ನಡೆಸಿ ಈ ಕಾರ್ಯಚಾರಣೆ ಮಾಡಲಾಗಿದೆ.

ನಗರದ ಬೆಂಗಳೂರು ರಸ್ತೆ, ಬಂಡಿಹಟ್ಟಿ, ಎ.ಪಿ.ಎಂ.ಸಿ ವೃತ್ತ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ, ಇಟ್ಟಂಗಿ ಭಟ್ಟಿ, ಗುಜರಿ ಶಾಪ್ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ಮಾಡಿ 02 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿ ತರಲು ಸಂಬಂಧಿಸಿದ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಬಳ್ಳಾರಿ ತಾಲ್ಲೂಕು ಕಚೇರಿಯ ಶಿರಸ್ಥೆದಾರರಾದ ಸಾದಿಕ್, ಕಾರ್ಮಿಕ ನಿರೀಕ್ಷಕ ರವಿದಾಸ್, ಶಿಕ್ಷಣ ಸಂಯೋಜಕ ಪಂಪಾಪತಿ, ಭುಜಂಗ ಆಚಾರಿ, ರುದ್ರ ಆಚಾರಿ ಸೇರಿದಂತೆ ಚೈಲ್ಡ್ ಲೈನ್ ಸಿಬ್ಬಂದಿ ಚಂದ್ರಕಲಾ, ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ನಿಲೋಫಿಯಾ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ