Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕೌಟುಂಬಿಕ ಹಿಂಸೆಯ ನಿಯಂತ್ರಣಕ್ಕೆ ಅರಿವು ಅಗತ್ಯ : ನ್ಯಾ.ಸಂತೋಷ್ ಎಂ.ಎಸ್.

ಶಿವಮೊಗ್ಗ : ಡಿಸೆಂಬರ್ 19 : : ಕೌಟುಂಬಿಕ ದೌರ್ಜನ್ಯ ಕಾಯ್ದೆಯಿಂದಾಗಿ ಮಹಿಳೆಯರ ರಕ್ಷಣೆ ಮತ್ತು ಕಾಯ್ದೆಯು ಸಿವಿಲ್ ಮತ್ತು ಕ್ರಿಮಿನಲ್ ನಿಬಂಧನೆಗಳನ್ನು ಹೊಂದಿದ್ದರೂ ಸಂತ್ರಸ್ಥ ಮಹಿಳೆಯರು 60ದಿನಗಳಲ್ಲಿ ತಕ್ಷಣದ ನಾಗರೀಕ ಪರಿಹಾರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಆಲ್ಕೊಳದ ಮಲ್ಟಿಪರ್ಪಸ್ ಸೋಶಿಯಲ್ ಸೊಸೈಟಿ ಸಭಾಂಗಣದಲ್ಲಿ ಕೌಟುಂಬಿಕ ಹಿಂಸೆಯಿoದ ಮಹಿಳೆಯರ ಸುರಕ್ಷತಾ ಕಾಯ್ದೆ -2005ರ ಅನುಷ್ಠಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರ ಎಂಬ ವಿಷಯದ ಕುರಿತು ವಿವಿಧ ತಾಲೂಕುಗಳ ಸಂಬoಧಿತ ಇಲಾಖೆಗಳ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ದೌರ್ಜನ್ಯಕ್ಕೊಳಗಾದ ಮಹಿಳೆಯರು ತನ್ನೊಂದಿಗೆ ಕೌಟುಂಬಿಕ ಸಂಬoಧ ಹೊಂದಿರುವ ಯಾವುದೇ ಪುರುಷ ವಯಸ್ಕ ಅಪರಾಧಿಯ ವಿರುದ್ಧ ಈ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಬಹುದಾಗಿದೆ ಎಂದವರು ತಿಳಿಸಿದರು.

ಬಹುಮುಖ್ಯವಾಗಿ ಈ ಕಾಯ್ದೆಯ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುವ ವಿವಿಧ ಇಲಾಖೆಗಳ ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಅರಿವು ಮತ್ತು ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ. ಪ್ರಕರಣ ದಾಖಲಿಸುವ ಮುನ್ನ ವಿಷಯದ ಪ್ರಾಥಮಿಕ ಮಾಹಿತಿಯನ್ನು ಹೊಂದಿದ್ದು, ಪ್ರಕರಣ ಮತ್ತು ಅದರ ಸಂದರ್ಭವನ್ನು ತಿಳಿದುಕೊಳ್ಳಬೇಕು. ಪ್ರಕರಣದ ಮುಕ್ತಾಯದ ನಂತರವೂ ಸಂತ್ರಸ್ಥ ವ್ಯಕ್ತಿಗೆ ನ್ಯಾಯ ಕೊಡಿಸಬೇಕಾದ ಬಗ್ಗೆಯೂ ಮಾಹಿತಿ ಹೊಂದಿರಬೇಕೆAದವರು ನುಡಿದರು.

ಅಧಿಕಾರಿಗಳು ಕಾಯ್ದೆಯ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳು ಹಾಗೂ ತಕ್ಷಣದ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ಹೊಂದಿರಬೇಕಲ್ಲದೇ ಕಾಯ್ದೆಯ ಸ್ವರೂಪ, ಅನುಕೂಲ ಮತ್ತು ಅನುಸರಣಾ ಕ್ರಮಗಳ ಮಾಹಿತಿ ಹೊಂದಿದ್ದು, ದೌರ್ಜನ್ಯದ ಕುರಿತು ಸ್ಪಷ್ಟವಾದ ಮಾಹಿತಿಯನ್ನು ದೂರಿನಲ್ಲಿ ದಾಖಲಿಸಬೇಕು. ಅಂತೆಯೇ ನ್ಯಾಯಾಲಯಗಳೂ ಕೂಡ ಪ್ರಕರಣವನ್ನು ಬಹುಸೂಕ್ಷö್ಮವಾಗಿ ಪರಿಶೀಲಿಸಿ ತೀರ್ಪು ನೀಡಬೇಕು ಎಂದರು.

ದೇಶದಲ್ಲಿ ಕೌಟುಂಬಿಕ ಹಿಂಸೆಯಿoದ ದಾಖಲಾಗಿರುವ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯವೇ ಮುಂಚೂಣಿಯಲ್ಲಿರುವುದು ಅತ್ಯಂತ ನೋವಿನ ಸಂಗತಿ. - ಸಂತೋಷ್ ಎಂ.ಎಸ್., ಹಿರಿಯ ಸಿವಿಲ್ ನ್ಯಾಯಾಧೀಶರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಸ್.ನಟರಾಜ್ ಅವರು ಮಾತನಾಡಿ, ಕ್ಷಲ್ಲಕ ಕಾರಣಗಳಿಂದಾಗಿ, ಹೊಂದಾಣಿಕೆಯ ಕಾರಣಗಳಿಂದಾಗಿ ಅನೇಕ ಪ್ರಕರಣಗಳಲ್ಲಿ ಕೌಟುಂಬಿಕ ವಿಘಟನೆಗಳು ನಡೆಯುತ್ತಿವೆ. ಬಹುಸಂಖ್ಯಾತ ಮಹಿಳೆಯರು ಕೌಟುಂಬಿಕ ಹಿಂಸೆ ಅನುಭವಿಸುವಂತಾಗಿದೆ. ವರದಕ್ಷಿಣೆ, ಆಸ್ತಿ ಹಂಚಿಕೆ, ಮತ್ತಿತರ ಕಾರಣಗಳಿಂದಾಗಿ ಮಹಿಳೆಯರಿಗೆ ಸಕಾಲಕ್ಕೆ ಸೂಕ್ತ ಸಹಾಯಹಸ್ತ ದೊರೆಯದೇ ತೊಂದರೆಗೆ ಒಳಗಾಗುತ್ತಿದ್ದಾರೆ ಎಂದರು.

ಪ್ರತಿ ಕುಟುಂಬದಲ್ಲಿ ಹೊಂದಾಣಿಕೆ, ನಂಬಿಕೆ ಇರಬೇಕಾದ ಅಗತ್ಯವಿದೆ. ಅಲ್ಲದೇ ಕುಟುಂಬದಲ್ಲಿ ಕಂಡುಬರುವ ಅನೇಕ ಸಮಸ್ಯೆಗಳಿಗೆ ಪರಸ್ಪರರಲ್ಲಿ ಮುಕ್ತ ಸಮಾಲೋಚನೆಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಚರ್ಚೆ, ಸಮಾಲೋಚನೆಗಳು ಸಂಬoಧವನ್ನು ಗಟ್ಟಿಗೊಳಿಸುವಲ್ಲಿ ಸಹಕಾರಿಯಾಗಿವೆ ಎಂದರು.

ಕೌಟುಂಬಿಕ ಹಿಂಸೆ ನಿಯಂತ್ರಿಸುವಲ್ಲಿ ಅಧಿಕಾರಿಗಳಿಗೆ ತರಬೇತಿಯ ಮೂಲಕ ಮಾಹಿತಿ ಮತ್ತು ಅರಿವು ಮೂಡಿಸುವುದು, ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕೌಟುಂಬಿಕ ಹಿಂಸೆತಡೆ ಕಾಯ್ದೆಯನ್ನು ಸಮರ್ಪಕ ಅನುಷ್ಠಾನಗೊಳಿಸಬಹುದಾಗಿದೆ. - ಬಿ.ಹೆಚ್.ಕೃಷ್ಣಪ್ಪ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ.

ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶಶಿರೇಖಾ, ಮಹಿಳಾ ಪೊಲೀಸ್ ಇನ್ಸ್ಫೆಕ್ಟರ್ ಶ್ರೀಮತಿ ಕವಿತಾ ಸೇರಿದಂತೆ ಪೊಲೀಸ್, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸ್ವಯಂಸೇವಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ