Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ


ಕೊಪ್ಪಳ ಆಗಸ್ಟ್ 05: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ ಕಾನೂನುಗಳ ಕುರಿತು ಸೋಮವಾರದಂದು ಜಾಗೃತಿ ಮೂಡಿಸಲಾಯಿತು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇಂದರಗಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ``ಕಾಯಂ ಜನತಾ ನ್ಯಾಯಾಲಯ ಕಾರ್ಯವಿಧಾನ ಪರಿಚಯ, ನಾಲ್ಸಾ ಜಾಗೃತಿ ಯೋಜನೆ-2025 ಹಾಗೂ ಮಕ್ಕಳ ಹಕ್ಕುಗಳು ಬಾಲ್ಯ ವಿವಾಹ ನಿಷೇಧ ಕಾಯ್ದೆ ಪೋಕ್ಸೋ ಕಾಯ್ದೆ''ಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ್ ಅವರು ಗಿಡಕ್ಕೆ ನೀರೆಯುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಮತ್ತು ಅದರ ಅಡಿಯಲ್ಲಿ ಇರುವ ಶಿಕ್ಷೆಗಳ ಕುರಿತು ಮತ್ತು ಬಾಲ್ಯ ವಿವಾಹದಿಂದ ಆಗುವ ದುಷ್ಪರಿಣಾಮಗಳು, ಕಾನೂನಿನ ಸೂಕ್ಷ್ಮತೆಗಳು ಮತ್ತು ಮಕ್ಕಳ ಬೆಳವಣಿಗೆಗಳ ಸೂಕ್ಷ್ಮತೆಗಳ ಕುರಿತು ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತ ಸ್ವಾಮಿ ಪೂಜಾರ ಅವರು, ಮಕ್ಕಳ ಹಕ್ಕುಗಳಾದ ಬದುಕುವ ರಕ್ಷಣೆಯ ವಿಕಾಸ ಹೊಂದುವ ಮತ್ತು ಭಾಗವಹಿಸುವ ಹಕ್ಕುಗಳ ಕುರಿತು ಮಾಹಿತಿಯನ್ನು ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದದ ಶಿವಲೀಲಾ ವನ್ನೂರು ಅವರು, ಪೋಕ್ಸೋ ಕಾಯ್ದೆ ಅಡಿಯಲ್ಲಿನ ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶದ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀರಾಮಪ್ಪ ಅವರು, ಅಗ್ನಿ ಅವಘಡದ ಸಂದರ್ಭದಲ್ಲಿ ಯಾವ ರೀತಿ ಅಗ್ನಿಯನ್ನು ನಂದಿಸುವುದು ಎಂಬುದರ ಕುರಿತು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಮಹೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವರದವ್ವ ನಿಂಗಪ್ಪ ಎಮ್ಮಿ, ಉಪಾಧ್ಯಕ್ಷರಾದ ಅಮರೇಶ್, ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಬಸವರಾಜ್ ಹಿರೇಗೌಡ್ರು, ಮುನಿರಾಬಾದ್ ಪೊಲೀಸ್ ಠಾಣೆಯ ಅಮರೇಶ, ಅಂಗನವಾಡಿ ಮೇಲ್ವಿಚಾರಕಿ ಉಷಾ ಸಿಂಗ್ ಸೇರಿದಂತೆ ಇಂದ್ರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಗ್ರಾಮದ ಗುರುಹಿರಿಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಸ್ತಾವನೆಯನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ್ ಎಸ್.ಎಚ್ ಅವರು ನೆರವೇರಿಸಿದರು. ಮಕ್ಕಳ ರಕ್ಷಣಾ ಘಟಕದ ಪ್ರತಿಭಾ ಕಾಶಿಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಮಕ್ಕಳ ಸಹಾಯವಾಣಿಯ ಶರಣಪ್ಪ ಸಿಂಗನಾಳ್ ಅವರು ಕೊನೆಯಲ್ಲಿ ವಂದಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ