Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮಕ್ಕಳಲ್ಲಿ ಪೋಕ್ಸೋ ಮತ್ತು ಬಾಲ್ಯ ವಿವಾಹ ಕಾಯ್ದೆ ಅರಿವು ಅತ್ಯಗತ್ಯ : ನ್ಯಾ.ಸಂತೋಷ್ ಎಂ ಎಸ್


ಶಿವಮೊಗ್ಗ,ಜು.23: ಸಾಮಾಜಿಕ ಜಾಲತಾಣದ ಪರಿಣಾಮದಿಂದಾಗಿ ಪ್ರಸ್ತುತ ಮಕ್ಕಳ ಮೇಲಿನ ಅಪರಾಧಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು, ಎಲ್ಲ ಮಕ್ಕಳು ಪೋಕ್ಸೋ ಹಾಗೂ ಬಾಲ್ಯವಿವಾಹದ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಕೋಶ ಮತ್ತು ಕ್ಷೇತ್ರ ಶಿಕ್ಷಾಣಾಧಿಕಾರಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಪ್ರೌಢಶಾಲೆಗಳ ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಹಾಗೂ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಬಗ್ಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣಗಳ ಆಕರ್ಷಷಣೆಗೆ ಒಳಗಾಗಿ ಇತ್ತೀಚೆಗೆ ಚಿಕ್ಕ ವಯಸ್ಸಿನ ಮಕ್ಕಳು ಮನೆ ಬಿಟ್ಟು ಹೋಗಿ ಮದುವೆಯಾಗುತ್ತಿರುವುದು ಹಾಗೂ ಇತರೆ ಅಪರಾಧಗಳನ್ನು ಕಾಣುತ್ತಿದ್ದೇವೆ. 2023-24ರಲ್ಲಿ ನಮ್ಮ ಜಿಲ್ಲಾ ವ್ಯಾಪ್ತಿಯಲ್ಲೇ 247 ಜನ ಬಾಲ ಗರ್ಭಿಣಿಯರ ಪ್ರಕರಣ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳು ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾನೂನು ನಮ್ಮೆಲ್ಲರಿಗೆ ಹಲವು ಮೂಲಭೂತ ಹಕ್ಕುಗಳನ್ನು, ಸ್ವಾತಂತ್ರö್ಯವನ್ನು ನೀಡಿದೆ. ಅದರ ದುರ್ಬಳಕೆ ಆಗಬಾರದು. ದುರ್ಬಳಕೆಯನ್ನು ತಡೆಯಲು ಕಾಯ್ದೆಗಳ ರೂಪದಲ್ಲಿ ಕೆಲವು ನಿರ್ಬಂಧಗಳನ್ನು ಹಾಕಲಾಗಿದೆ.

ಕಾನೂನಿನ ಕಣ್ಣಿನಲ್ಲಿ ನಾವೆಲ್ಲರೂ ಸಮಾನರು. ಇದು ಸಂವಿಧಾನದಲ್ಲೂ ಅಡಕವಾಗಿದೆ. ನಮ್ಮ ನೆಲದ ಕಾನೂನು ಸಂವಿಧಾನ, ಇದೇ ನಮ್ಮ ತಳಹದಿ ಮತ್ತು ಬುನಾದಿ, ನಾವೆಲ್ಲರು ನಮ್ಮ ನೆಲದ ಕಾನೂನನ್ನು ಅನುಸರಿಸಬೇಕು. ಕಾನೂನು ಎಂದರೆ ಒಂದು ಸಾಮಾನ್ಯ ಜ್ಞಾನ. ಅದನ್ನು ನಾವೆಲ್ಲರೂ ಅರಿತಿರಬೇಕು ಎಂದರು.

ಪೋಕ್ಸೊ ಹಾಗೂ ಬಾಲ್ಯವಿವಾಹ ಕಾಯ್ದೆಗಳ ಬಗ್ಗೆ ಎಲ್ಲ ಮಕ್ಕಳಿಗೆ ಅರಿವು ಇರಬೇಕು. ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಜ್ಞಾನ ಇರಬೇಕು. ಯಾವುದೋ ಉದ್ದೇಶದಿಂದ ಪುರುಷ/ಗಂಡು ಮಕ್ಕಳು ಹೆಣ್ಣು ಮಕ್ಕಳನ್ನು ಮುಟ್ಟುವುದು, ಸ್ವರ್ಶಿಸುವುದರ ಕುರಿತು ಜಾಗೃತೆಯಿಂದರಬೇಕು.

ಪೋಕ್ಸೋ ಹಾಗೂ ಬಾಲ್ಯ ವಿವಾಹ ಕಾಯ್ದೆಗಳಡಿಯಲ್ಲಿ ಹೆಣ್ಣು ಮಕ್ಕಳಿಗೆ ಎಲ್ಲ ರೀತಿಯಲ್ಲಿ ರಕ್ಷಣೆ ಇದೆ. ಅದನ್ನು ಸರಿಯಾದ ಕ್ರಮದಲ್ಲಿ ಬಳಸಿಕೊಳ್ಳಬೇಕು. ಶಾಲೆ ಹಾಗೂ ತಮ್ಮ ಸುತ್ತಮುತ್ತಲಿನಲ್ಲಿ ಬ್ಯಾಡ್ ಟಚ್‌ನಂತಹ ಪ್ರಕರಣಗಳು ಅಥವಾ ಇಂತಹ ಅನುಭವವಾದರೆ ಶಾಲಾ ಶಿಕ್ಷಕರಿಗೆ ಅಥವಾ ತಂದೆ ತಾಯಿಗೆ ಕೂಡಲೇ ತಿಳಿಸಬೇಕು. ನಿಮ್ಮನ್ನು ರಕ್ಷಣೆ ಮಾಡುವ ಸಂಪೂರ್ಣ ಜವಾಬ್ದಾರಿ ಕಾನೂನು ಕೈಗೊಳುತ್ತದೆ ಎಂದು ಕಿವಿ ಮಾತು ಹೇಳಿದರು.

ಮಾಜಿ ರಾಷ್ಟçಪತಿ ಅಬ್ದುಲ್ ಕಲಾಂ ಅವರ ಮಾತಿನಂತೆ “ದೇವರು ಯಾವಾಗಲು ನಮ್ಮ ಜೊತೆ ಇರುತ್ತಾರೆ. ಇವತ್ತು ನನ್ನ ದಿನ, ನಾನು ಇದನ್ನು ಮಾಡುತ್ತೇನೆ, ನಾನೇ ಉತ್ತಮ, ನಾನೇ ವಿಜಯಶಾಲಿ” ಈ 5 ಸೂತ್ರಗಳು ಮಕ್ಕಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಜ್ಞಾನದ ಮೇಲೆ ನಂಬಿಕೆ ಮತ್ತು ವಿಶ್ವಾಸ ಬೆಳೆಸಿಕೊಳ್ಳಬೇಕು. ಆ ದಿಸೆಯಲ್ಲಿ ಸಾಗಿದರೆ ಯಶಸ್ಸು ಪಡೆಯಬಹುದು ಎಂದು ಮಕ್ಕಳನ್ನು ಉತ್ತೇಜಿಸಿದರು.

ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಪೋಕ್ಸೋ ಹಾಗೂ ಬಾಲ್ಯ ವಿವಾಹ ಕಾಯ್ದೆ ಕುರಿತು ಅರಿವು ಅತ್ಯಗತ್ಯ. ಸರ್ಕಾರಿ ಶಾಲೆಯಲ್ಲಿ ಬಡವರು ಹಾಗೂ ಮಧ್ಯವರ್ಗದ ಮಕ್ಕಳೇ ಹೆಚ್ಚಾಗಿ ಓದುವುದರಿಂದ ಆ ಮಕ್ಕಳ ಕುಟುಂಬದ ತಂದೆ ತಾಯಿಗಳು ಅನಕ್ಷರಸ್ಥರಾಗಿರುತ್ತಾರೆ. ಇದರಿಂದ ಪೋಕ್ಸೋ ಹಾಗೂ ಬಾಲ್ಯ ವಿವಾಹದಂತಹ ಕಾಯ್ದೆಗಳ ಬಗ್ಗೆ ಕುಟುಂಬಕ್ಕೆ ಮತ್ತು ಮಕ್ಕಳಿಗೆ ಸಾಮಾನ್ಯವಾಗಿ ಅರಿವು ಇರುವುದಿಲ್ಲ. ಈ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಗರದ 7 ಕರ್ನಾಟಕ ಪಬ್ಲಿಕ್ ಶಾಲೆಗಳ ಮಕ್ಕಳನ್ನು ಒಟ್ಟಾಗಿ ಸೇರಿಸಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಮೂಲಕ ಅವರಿಗೆ ಪೋಕ್ಸೋ ಹಾಗೂ ಬಾಲ್ಯವಿವಾಹ ಕಾಯ್ದೆದ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು ಮಕ್ಕಳು ಇದರ ಸದುಪಯೋಗ ಪಡೆಯಬೇಕು ಎಂದರು.

ಈ ವೇಳೆ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಡಿಡಿಪಿಐ ಮಂಜುನಾಥ್, ಕ್ಷೇತ್ರ ಸಮನ್ವಯ ಅಧಿಕಾರಿ ಶಿವಣ್ಣ ಸಂಗಣ್ಣನವರ್, ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ