Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಗ್ರಾಮ ಒನ್ ಕೇಂದ್ರದಲ್ಲಿ ಖಾಲಿ ಇರುವ ಫ್ರಾಂಚೈಸಿ ಹುದ್ದೆಗೆ ಆನ್‌ಲೈನ್ ಅರ್ಜಿ ಆಹ್ವಾನ

ಬಳ್ಳಾರಿ,ಜು.04
ಜಿಲ್ಲಾದ್ಯಂತ ನಾಗರಿಕರಿಗೆ ಉತ್ತಮ ಸೇವೆಗಳನ್ನು ನೀಡುತ್ತಿರುವ ‘ಗ್ರಾಮ ಒನ್' ಕೇಂದ್ರಗಳ ಪೈಕಿ, ಪ್ರಸ್ತುತ ಖಾಲಿ ಇರುವ ಗ್ರಾಮ ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ತಿಳಿಸಿದೆ.
ಸರ್ಕಾರದ ಇ-ಆಡಳಿತ ಇಲಾಖೆಯ ಇಡಿಸಿಎಸ್ ನಿರ್ದೇಶನಾಲಯದ ಸೂಚನೆಯಂತೆ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಗೆ ಒಟ್ಟು 177 ಗ್ರಾಮ ಒನ್ ಕೇಂದ್ರಗಳು ಮಂಜೂರಾಗಿದ್ದು, ಈ ಪೈಕಿ ಈಗಾಗಲೇ 167 ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.
ಉಳಿದ ಕೇಂದ್ರಗಳ ಪೈಕಿ 09 ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಸ್ವೀಕರಿಸಲಾದ ಅರ್ಜಿಗಳು ಸದ್ಯ ಪರಿಶೀಲನಾ ಹಂತದಲ್ಲಿದ್ದು, ಬಾಕಿ ಇರುವ 01 ಕೇಂದ್ರಕ್ಕೆ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.
*ಖಾಲಿ ಇರುವ ಕೇಂದ್ರದ ವಿವರ:*
ಸಂಡೂರು ತಾಲ್ಲೂಕಿನ ನರಸಿಂಗಪುರ ಗ್ರಾಮ ಪಂಚಾಯಿತಿ.
ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಸಂಪೂರ್ಣ ವಿವರಗಳನ್ನು https://sevasindhuservices.karnataka.gov.in/directApply... ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಆಸಕ್ತರು ಅಧಿಕೃತ ಲಿಂಕ್ ಬಳಸಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಡೂರು ತಹಶೀಲ್ದಾರರ ಕಚೇರಿ ಅಥವಾ ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ