Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಳ್ಳಾರಿ: ತಲೆದೂಗಿಸಿದ “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮ





ಬಳ್ಳಾರಿ,ಆ.03

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮವು ನೆರೆದಿದ್ದ ಜನತೆಯ ತಲೆದೂಗಿಸಿತು.

ಕಾರ್ಯಕ್ರಮವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಉದ್ಘಾಟಿಸಿ, ಬಳಿಕ ಮಾತನಾಡಿದ ಅವರು ಜಾನಪದ, ತತ್ವಪದ, ಸುಗಮ ಸಂಗೀತ, ಶೋಭಾನೆ ಪದಗಳು, ರಂಗಗೀತೆ ಸೇರಿದಂತೆ ಈ ನೆಲ ಮೂಲದ ಕಲಾಪ್ರಕಾರಗಳನ್ನು ಪ್ರಸ್ತುತಪಡಿಸುವ ಕಲೆ ಮತ್ತು ಕಲಾವಿದರರ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು.

ಜಾನಪದ ಸಾಹಿತ್ಯ ಹಾಗೂ ತತ್ವಪದಗಳಿಗೆ ತನ್ನದೇ ಆದ ಇತಿಹಾಸ ಹೊಂದಿದೆ. ಈ ಹಿಂದೆ ಕೆಲಸದಿಂದ ದಣಿದು ಬಂದ ಹಿರಿಯರು ಪದಗಳನ್ನು ಹೇಳುತ್ತಾ ದಣಿವಾರಿಸಿಕೊಳ್ಳುತ್ತಿದ್ದರು. ಈ ಪ್ರಕಾರಗಳ ಕಲೆ ಮತ್ತು ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನದ ಕಾರ್ಯಕ್ರಮ ಇದಾಗಿದ್ದು, ಇಂತಹ ಕಾರ್ಯಕ್ರಮ ರೂಪಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಅರ್ಪಿಸುತ್ತೇನೆ ಎಂದರು.

ಹಿಂದಿನ ಕಾಲದಲ್ಲಿ ತತ್ವಪದ, ಜಾನಪದ ಗೀತೆಗಳು ವ್ಯಕ್ತಿಯನ್ನು ಕೆಳಮಟ್ಟದಿಂದ ಮೇಲ್ಮಟ್ಟಕ್ಕೆ ಉತ್ತಮ ನಾಗರಿಕರನ್ನಾಗಿ ಬೆಳೆಸುತ್ತಿದ್ದವು. ಗ್ರಾಮೀಣ ಭಾಗದಲ್ಲಿ

ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಹಳ್ಳಿಗಳಲ್ಲಿ ಹವ್ಯಾಸ ಜೀವನವಾಗಿದ್ದವು ಎಂದರು.

ತೊಗಲುಗೊಂಬೆಯ ಬೆಳಗಲ್ಲು ವೀರಣ್ಣ, ಕಲಾವಿದರಾದ ಮನ್ಸೂರ್ ಸುಭದ್ರಮ್ಮ ಸೇರಿದಂತೆ ಜಿಲ್ಲೆಯಲ್ಲಿ ಹಲವಾರು ರೀತಿಯ ಕಲಾವಿದರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಜಾನಪದಕಾರರು, ತತ್ವಪದಕಾರರು ಎಲೆ ಮರೆ ಕಾಯಿಯಂತೆ ಬಯಸುವವರು. ಯಾವುದೇ ಪ್ರಚಾರವನ್ನು ಬಯಸುವವರಲ್ಲ, ತಮ್ಮದೇ ಆದ ಸಾಹಿತ್ಯ ಲೋಕ, ತತ್ವಪದ ಲೋಕದಲ್ಲಿ ಬದುಕಿದವರು ಎಂದು ಬಿಂಬಿಸಿದರು.

*ಮನಸೊರೆಗೊಂಡ ಸಂಗೀತ ಗಾಯನ:*

ಬಳ್ಳಾರಿಯ ಎಸ್.ಎಂ ಹುಲುಗಪ್ಪ ತಂಡದಿಂದ ಜಾನಪದ ಗೀತೆಗಳು, ಸಿರುಗುಪ್ಪದ ಅಂಬಣ್ಣ ದಳವಾಯಿ ಅವರಿಂದ ಸುಗಮ ಸಂಗೀತ, ಬಳ್ಳಾರಿಯ ಕೆ.ಜಡೇಶ್ ಅವರಿಂದ ಭಾವ ಗೀತೆಗಳು, ಸಿರುಗುಪ್ಪ ತಾಲ್ಲೂಕಿನ ಉತ್ತನೂರಿನ ರಾಮಪ್ಪ ಅವರಿಂದ ರಂಗ ಗೀತೆಗಳು, ಕುರುಗೋಡು ತಾಲ್ಲೂಕಿನ ಕಲ್ಲುಕಂಬದ ಬಿ.ಆನಂದ ಅವರಿಂದ ಕ್ರಾಂತಿ ಗೀತೆಗಳು, ಸಂಗನಕಲ್ಲಿನ ಉಷಾ ಅವರಿಂದ ವಚನ ಗೀತೆಗಳು, ಯರ‍್ರಗುಡಿಯ ಸುಂಕಪ್ಪ ಹೆಚ್.ಜಿ ಅವರಿಂದ ಹೋರಾಟ ಗೀತೆಗಳು, ಇಬ್ರಾಹಿಂಪುರದ ಹೆಚ್.ಯರ‍್ರಿಸ್ವಾಮಿ ಅವರಿಂದ ಕ್ರಾಂತಿ ಗೀತೆಗಳು, ಕುರುಗೋಡಿನ ಕೆ.ಹನುಮಂತಪ್ಪ ಜೋಗಿ ಅವರಿಂದ ಕಿನ್ನರಿ ಜೋಗಿ ಪದಗಳು, ಕಂಪ್ಲಿ ತಾಲ್ಲೂಕಿನ ಮೆಟ್ರಿಯ ಸಿ.ಡಿ.ಮೌನೇಶ್ ಅವರಿಂದ ತತ್ವಪದ ಮತ್ತು ದಾಸರ ಪದಗಳು, ಸಂಡೂರು ತಾಲ್ಲೂಕಿನ ಭುಜಂಗನಗರದ ತಾಯಪ್ಪ ಅವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸಂಗನಕಲ್ಲಿನ ಮಾರೆಮ್ಮ ಅವರಿಂದ ಸಂಪ್ರದಾಯ ಗೀತೆಗಳು, ಸಿರುಗುಪ್ಪ ತಾಲ್ಲೂಕಿನ ಅರಳಿಗನೂರಿನ ನೀಲಗಂಗಮ್ಮ ಅವರಿಂದ ಶೋಭಾನೆ ಪದಗಳು ಸೇರಿದಂತೆ ವಿವಿಧ ಸಂಗೀತ ಗಾಯನ ಕೇಳುಗರ ಮನಸೂರೆಗೊಂಡವು.

ಈ ವೇಳೆ ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ, ಹಿರಿಯ ರಂಗಭೂಮಿ ಕಲಾವಿದರು ಹಾಗೂ ನೃತ್ಯ ಕಲಾವಿದರಾದ ಬಿ.ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಹಿರಿಯ ತತ್ವಪದಗಳ ಕಲಾವಿದ ಸಿ.ಡಿ.ಮಾರೆಪ್ಪ, ಬಯಲಾಟದ ಹಿರಿಯ ಕಲಾವಿದರು ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ.ರಂಗಾರೆಡ್ಡಿ, ಕುರುಗೋಡಿನ ಕಿನ್ನರಿ ಜೋಗಿ ಪದಗಳ ಗಾಯಕ ಕೆ.ಹನುಮಂತಪ್ಪ ಸೇರಿದಂತೆ ಕಲಾವಿದರು, ಸಾರ್ವಜನಿಕರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ