Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ರಿಪೇರಿ ಉಚಿತ ತರಬೇತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಬೈಕ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ
ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ