Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಹೇಮರೆಡ್ಡಿ ಮಲ್ಲಮ್ಮರ ಜೀವನ ಚರಿತ್ರೆ ಮತ್ತು ಜಯಂತಿ

ಮೇ 10 ರಂದು  ಹೇಮರಡ್ಡಿ ಮಲ್ಲಮ್ಮರ ಜಂಯಂತಿಯನ್ನು ಅಚರಿಸಲಾಗುತ್ತದೆ 500ವರ್ಷಗಳ ಹಿಂದೆ ಶ್ರೀಶೈಲದ ಸಮೀಪ ಶರಣೆಯಾಗಿ ಜೀವಿಸಿದ್ದವಳು ಹೇಮರೆಡ್ಡಿ ಮಲ್ಲಮ್ಮ. ಜನಪದರುಹೇಮರೆಡ್ಡಿಮಲ್ಲಮ್ಮನಬಗ್ಗೆಯೂಗೀತೆಯನ್ನುಸೃಷ್ಟಿಸಿಹಾಡಿದ್ದಾರೆ.ರಾಂಪುರದನಾಗರೆಡ್ಡಿಗೌರಮ್ಮರಸುಪುತ್ರಿಹೇಮರೆಡ್ಡಿಮಲ್ಲಮ್ಮ ಸಿದ್ದಾಪುರದಸೊಸಿಶ್ರೀಶೈಲ ಮಲ್ಲಿಕರ‍್ಜುನನನ್ನುಪೂಜಿಸಿಅತ್ತೆನೆಗೆಣ್ಣಿಯರಕಾಟ ಸಹಿಸಿಮಬ್ಬು ಗಂಡನ ಮಹಾದೇವನೆಂದು ಮನ್ನಿಸಿಮತಿಗೇಡಿಮೈದುನನಯೋಗಿವೇಮನನ ಮಾಡಿಮಹಾಯೋಗಿಯ ಮಹಾತಾಯಿಯಾಗಿಮಲ್ಲಮಾಂಬೆ ಬೆಳಗಿದಳು ರೆಡ್ಡಿಕುಲವ.

ಶ್ರೀಶೈಲದ ದಕ್ಷಿಣಕ್ಕಿರುವ ವೆಲ್ಲಟೂರು ಜಿಲ್ಲೆಗೆ ಸೇರಿದ ರಾಮಪುರದ ರಾಮರೆಡ್ಡಿ-ಗೌರಮ್ಮ ದಂಪತಿಗಳಿಗೆ ಶ್ರೀಶೈಲ ಚನ್ನಮಲ್ಲಿಕರ‍್ಜುನನ ಕೃಪೆಯಿಂದ ಜನಿಸಿದ ಹೆಣ್ಣು ಮಗುವೇ ಹೇಮರೆಡ್ಡಿ ಮಲ್ಲಮ್ಮ. ಈಕೆ ಬಾಲ್ಯದಿಂದಲೂ ಶ್ರೀಶೈಲ ಚನ್ನಮಲ್ಲಿಕರ‍್ಜುನನನ್ನೇ ಆರಾಧ್ಯ ದೈವವೆಂದು ಪರಿಭಾವಿಸಿ, ಕಡೆಯಲ್ಲಿ ದೇವರನ್ನೇ ಸಾಕ್ಷಾತ್ಕರಿಸಿಕೊಂಡವಳು. "ಶಿವ ಕರೆದ ಕಾಲಕ್ಕೆ ಮ್ಯಾಲಕ ಹೋಗಾಗ, ನಾಕು ಮಂದಿ ಕಳುಸಾಕ ಬರುವಂಗ ಇರಬೇಕು" ಎನ್ನು ಈಕೆಯ ಬಾಳು ಪವಿತ್ರ ಮೌಲ್ಯಗಳ, ಆರ‍್ಶದ, ಅತ್ಯಮೂಲ್ಯ ಕಣಜವಾಗಿದೆ.ಹೇಮರೆಡ್ಡಿ ಮಲ್ಲಮ್ಮ ಬೆಳೆದಾಗ ಅವಳನ್ನು ಸಮೀಪದ ಸಿದ್ದಾಪುರದ ಕುಮಾರಗಿರಿ ವೇಮರೆಡ್ಡಿಯ ಮಗ ಭರಮರೆಡ್ಡಿಗೆ ಮದುವೆ ಮಾಡಿಕೊಡುತ್ತಾರೆ.

 ಊರ ಜನರೆಲ್ಲ ಭರಮರೆಡ್ಡಿಯನ್ನು ಹುಚ್ಚನೆಂದು ಪರಿಗಣಿಸಿರುತ್ತಾರೆ. ಹೇಮರೆಡ್ಡಿ ಮಲ್ಲಮ್ಮ ಗಂಡನಲ್ಲಿದ್ದ ಮುಗ್ಧ, ಸಾಧುಸ್ವಭಾವವನ್ನು ಕಂಡು ಸಮಾಧಾನಗೊಳ್ಳುತ್ತಾಳೆ. ಪತಿಯನ್ನು ಮಹಾದೇವನಂತೆ ಉಪಚರಿಸುತ್ತಾಳೆ. ಜೀವನವಿಡಿ ಕಷ್ಟವನ್ನುಂಡರೂ, ಇತರರು ಕಷ್ಟದಲ್ಲಿರುವಾಗ, ತನ್ನ ನೋವನ್ನೆಲ್ಲ ಮರೆತು ಅವರನ್ನು ಜೋಪಾನ ಮಾಡುತ್ತಿದ್ದಳು.ಹೇಮರೆಡ್ಡಿ ಮಲ್ಲಮ್ಮಳ ಅತ್ತೆ ಆಕೆಗೆ ಉಣ್ಣುವುದಕ್ಕೆ, ಉಡುವುದಕ್ಕೆ ಸರಿಯಾಗಿ ಕೊಡದೆ, ಅವಳನ್ನು ಅಡವಿಗೆ ನೂಕಿ ಸಂಕಷ್ಟಗಳ ಸಂಕೋಲೆಗೆ ಸಿಗಿಸುವಳು. ಆದರೂ ಹೇಮರೆಡ್ಡಿ ಮಲ್ಲಮ್ಮ ನೊಂದುಕೊಳ್ಳದೆ ಕಾಡಿನಲ್ಲಿ ದನಗಳನ್ನು ಕಾಯುತ್ತಾ ಮಲ್ಲಿಕರ‍್ಜುನನ ಉಪಾಸನೆಯಲ್ಲಿ ಮಗ್ನ ಳಾಗಿರುತ್ತಿದ್ದಳು.ದಾನಚಿಂತಾಮಣಿಯಾದ ಮಲ್ಲಮ್ಮನಿಗೆ ಬುದ್ಧಿ ಕಲಿಸಲು ಅವಳ ಅತ್ತೆ ಮನೆಯ ಮುಂದೆ ಭಿಕ್ಷುಕ ಬಂದಾಗ ಸಿಟ್ಟುಗೊಂಡು ಒಲೆಯಲ್ಲಿನ ನಿಗಿನಿಗಿ ಕೆಂಡವನ್ನು ಅವಳ ಬೊಗಸೆಗೆ ಹಾಕಿ, ಬಾಗಿಲಲ್ಲಿ ನಿಂತಿದ್ದ ಭಿಕ್ಷುಕನಿಗೆ ನೀಡಲು ಹೇಳಿದಾಗ, ಮಲ್ಲಮ್ಮ ಅತ್ತೆಕೊಟ್ಟ ಕೆಂಡವನ್ನು ಸ್ವೀಕರಿಸಿ ಮನದಲ್ಲಿ ಮಲ್ಲಿಕರ‍್ಜುನನನ್ನು ನೆನೆದು ಭಿಕ್ಷರ‍್ಥಿಯ ಜೋಳಿಗೆಗೆ ಅದನ್ನೇ ನೀಡಿದಾಗ ಅದು ಧಾನ್ಯವಾಗಿ ಮರ‍್ಪಡುತ್ತದೆ. ಅಂದಿನಿಂದ ಮಲ್ಲಮ್ಮನ ಹೆಸರು ಬೆಂಕಿದಾನದ ಮಲ್ಲಮ್ಮ ಎಂದಾಯಿತು.ದುಶ್ಚಟಗಳ ದಾಸನಾದ ವೇಮನ ವೇಶ್ಯಾಸ್ತ್ರೀಯೊಬ್ಬಳ ಮನದಾಸೆ ಈಡೇರಿಸಲು, ಅತ್ತಿಗೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಬೇಕೆಂದು ಕೇಳುತ್ತಾನೆ

ಹೇಮರೆಡ್ಡಿ ಮಲ್ಲಮ್ಮ ಮೈದುನನಾದ ವೇಮನನಿಗೆ ಮೂಗುತಿ ಕೊಡಲು ಒಪ್ಪಿ ಕರಾರೊಂದನ್ನು ವಿಧಿಸುತ್ತಾಳೆ. ಅದೆಂದರೆ-"ವೇಮನ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಆ ವೇಶ್ಯಾಸ್ತ್ರೀಗೆ ಕೊಡುವಾಗ, ಆಕೆ ನಗ್ನಳಾಗಿ ಬಂದು ವೇಮನ ಕುಳಿತದ್ದ ಮಂಚವನ್ನು ಮೂರು ಸುತ್ತು ಸುತ್ತಬೇಕು.ಮೂರು ಸುತ್ತು ಹಾಕಿದ ನಂತರ ಹಿಂಬದಿಗೆ ಬಾಗಿ, ಎರಡು ಕಾಲುಗಳ ನಡುವೆ ಬಗ್ಗಿ ಕೈ ಚಾಚಿ ವೇಮನನಿಂದ ಮೂಗುತಿಯನ್ನು ಪಡೆಯಬೇಕು. ಅವಳು ಆ ಮೂಗುತಿಯನ್ನು ಪಡೆಯುವವರೆಗೂ ವೇಮನ ಆಕೆಯ ನಗ್ನಶರೀರವನ್ನು ತದೇಕ ಚಿತ್ತನಾಗಿ ನೋಡಬೇಕು". ವೇಮನ ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮನ ಮಾತನ್ನು ಚಾಚು ತಪ್ಪದೆ ಪಾಲಿಸುತ್ತಾನೆ. ತನ್ನ ಪ್ರೇಯಸಿಯನಗ್ನಶರೀರವನ್ನು ಕಂಡೊಡನೆ ಅವನೊಳಗೆ ಭಯಂಕರವಾದ ಜಿಗುಪ್ಸೆ, ಅಸಹ್ಯಭಾವನೆ ಆವರಿಸಿ ಒಡನೆಯೇ ಗಾಭರಿಗೊಂಡು ಕಣ್ಮುಚ್ಚಿ ಎಂದು ತತ್ವ್ತಜ್ಞಾನ ಹೇಳುತ್ತಾ, ತಾನು ನಗ್ನನಾಗಿ ವೈರಾಗಿಯಂತೆ ಕಾಲ್ತೆಗೆದು ಹೊರ ಹೋರಟವನು, ಮುಂದೆ ತನ್ನ ಸಾಧನೆಯಿಂದ ಮಹಾಯೋಗಿಯಾದನು.

ಮಲ್ಲಮ್ಮ ಇಹಲೋಕ ಯಾತ್ರೆ ಮುಗಿಸುವ ಮೊದಲು ಆಕೆಗೆ ಮಲ್ಲಿಕರ‍್ಜುನ, ಆಕೆಯ ನಿಷ್ಕಳಂಕ ಭಕ್ತಿಗೆ ಮನಸೋತು ಮಲ್ಲಮ್ಮನಿಗೆ ರ‍್ಶನವಿತ್ತು ವರವೇನು ಬೇಕು ಕೇಳು ಎಂದಾಗ ಮಲ್ಲಮ್ಮ- ತನ್ನ ಬಳಗಕ್ಕೆಂದೂ ಬಡತನ ಬಾರದಿರಲಿ, ಅವರಿಗೆಂದೂ ಉಣ್ಣಲು-ಉಡಲು-ತೊಡಲು ಯಾವ ಕೊರತೆಯೂ ಆಗದಿರಲಿ, ಮಲ್ಲಿಕರ‍್ಜುನನ ಪೂಜೆ, ಜಾತ್ರೆ ಮತ್ತು ಉತ್ಸವಗಳು ನಿರಂತರ ನಡೆಯಬೇಕು ಎನ್ನುತ್ತಾಳೆ. ಮಲ್ಲಿಕರ‍್ಜುನ ಅವಳು ಬೇಡಿದಂತಹ ವರವನ್ನು ನೀಡುತ್ತಾನೆ.

 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ