ಬಳ್ಳಾರಿ,ಅ.15
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದಡಿ ಅ.18 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಅಂತರಾಷ್ಟಿçÃಯ ಹೆಣ್ಣುಮಕ್ಕಳ ಜನ್ಮೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಉಮಾದೇವಿ ಸೇರಿದಂತೆ ಇತರರು ಮುಖ್ಯ ಅಥಿತಿಗಳಾಗಿ ಭಾಗವಹಿಸಿವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶ ರಾಮಕೃಷ್ಣ ನಾಯಕ.ಎಂ ಸೇರಿದಂತೆ ಕಚೇರಿಯ ಅಧಿಕಾರಿಗಳು ಮತ್ತ ಸಿಬ್ಬಂದಿ ವರ್ಗದವರು ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Also read