Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ*



ಬೆಂಗಳೂರು, ಜೂನ್‌ 10-

ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.



ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.



ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264 ನಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ