Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಲಾಹೋಟಿ ಲಾ ಕಾಲೇಜಿನ ಎನ್.ಎಸ್.ಎಸ್ ಘಟಕದಿಂದ ಶ್ರೀನಿವಾಸ ಸರಡಗಿಯಲ್ಲಿ ಶಿಬಿರ

ಕಲಬುರಗಿ (ಆ.03): ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಕಲಬುರಗಿ ನಗರದಲ್ಲಿರುವ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶೇಠ ಶಂಕರಲಾಲ ಲಾಹೋಟಿ ಲಾ ಕಾಲೇಜಿನ ರಾಷ್ಟಿಯ ಸೇವಾ ಯೋಜನೆ (ಎನ್.ಎಸ್.ಎಸ್) ಘಟಕದ ವಿದ್ಯಾರ್ಥಿಗಳು ಶುಕ್ರವಾರ ಶಿಬಿರ ನಡೆಸಿದರು.
ಲಾಹೋಟಿ ಲಾ ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿಯಾಗಿರುವ ಉಪನ್ಯಾಸಕಿ ಡಾ. ಜ್ಯೋತಿ ಕಡಾದಿ, ವಿದ್ಯಾರ್ಥಿ ಸಂಯೋಜಕಿ, ಉಪನ್ಯಾಸಕಿ ಕರುಣಾ ಪಾಟೀಲ್ ರವರ ನೇತೃತ್ವದಲ್ಲಿ ಶ್ರೀನಿವಾಸ ಸರಡಗಿ ಗ್ರಾಮಕ್ಕೆ ಆಗಮಿಸಿದ ಎನ್.ಎಸ್.ಎಸ್ ವಿದ್ಯಾರ್ಥಿಗಳು ಗ್ರಾಮದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ಸ್ವಚ್ಚತಾ ಕಾರ್ಯಕ್ರಮ ನಡೆಸಿ, ಸಸಿ ನಾಟಿ ಮಾಡುವ ಮೂಲಕ ಶ್ರಮದಾನ ಮಾಡಿದರು. ಇದೇ ವೇಳೆ ಅವರು, ಗ್ರಾಮದಲ್ಲಿನ ಮನೆಗಳಿಗೆ ತೆರಳಿ ಸರ್ವೆ ಕಾರ್ಯ ನಡೆಸಿ, ಜನರಿಗೆ ಕಾನೂನಿನ ಅರಿವು ಮೂಡಿಸುವ ಕೆಲಸ ಮಾಡಿದರು.
ಬಳಿಕ ಸಂಜೆಯ ವೇಳೆ ಶ್ರೀನಿವಾಸ ಸರಡಗಿಯ ಶ್ರೀ ಚಿನ್ನದ ಕಂತಿ ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಆವರಣದಲ್ಲಿ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಷ.ಬ್ರ ಡಾ.ರೇವಣಸಿದ್ದ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ, ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದ ಪರಮ ಪೂಜ್ಯ ಶ್ರೀ ಷ.ಬ್ರ ಡಾ.ರೇವಣಸಿದ್ದ ಶಿವಾಚಾರ್ಯರು, ಎನ್.ಎಸ್.ಎಸ್ ಶಿಬಿರದಿಂದ ಏನೆಲ್ಲಾ ಲಾಭಗಳು ಇವೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.
ಕಾನೂನು ವಿದ್ಯಾರ್ಥಿಗಳ ಮೇಲೆ ಬಹಳಷ್ಟು ದೊಡ್ಡಮಟ್ಟದ ಜವಾಬ್ದಾರಿ ಇರುತ್ತದೆ. ಕಾನೂನು ವಿದ್ಯಾರ್ಥಿಗಳಿಂದ ಬಹಳಷ್ಟು ಜನರು ಒಳಿತನ್ನು ನಿರೀಕ್ಷೆ ಮಾಡ್ತಿರುತ್ತಾರೆ. ಇಂತಹ ಶಿಬಿರಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡುವುದರಿಂದ ಸಾಕಷ್ಟು ಅನುಕೂಲಗಳಾಗುತ್ತವೆ.


ಗ್ರಾಮೀಣ ಭಾಗದ ಜನರಿಗೆ ಪರಿಸರದ, ಕಾನೂನಿನ ಅರಿವು ಮೂಡಿಸುವುದು ಬಹಳ ಮುಖ್ಯವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರಗಳನ್ನು ಮಾಡುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಕಾನೂನಿನ ಅರಿವು ಮೂಡಿಸುವ ಕೆಲಸಗಳನ್ನು ಕಾನೂನು ವಿದ್ಯಾರ್ಥಿಗಳು ಮಾಡಬೇಕು ಎಂದು ಡಾ.ರೇವಣಸಿದ್ದ ಶಿವಾಚಾರ್ಯರು ಕರೆ ನೀಡಿದರು.
ಇದೇ ವೇಳೆ ಮಾತನಾಡಿದ ಎನ್.ಎಸ್.ಎಸ್ ಅಧಿಕಾರಿ ಡಾ. ಜ್ಯೋತಿ ಕಡಾದಿ, ಎನ್.ಎಸ್.ಎಸ್ ಸೇರುವ ವಿದ್ಯಾರ್ಥಿಗಳು ಸೇವಾ ಮನೋಭಾವಕ್ಕೆ ತಯಾರಾಗಿರುತ್ತಾರೆ ಎಂಬುದನ್ನು ನಮ್ಮ ವಿದ್ಯಾರ್ಥಿಗಳು ಸಾಬೀತು ಮಾಡಿದ್ದಾರೆ. ಅವರು ಸರಡಗಿ ಗ್ರಾಮದಲ್ಲಿ ಸ್ವಚ್ಚತೆ ನಡೆಸಿ, ತಗ್ಗು ತೆಗೆದು ಸಸಿ ನಾಟಿ ಮಾಡಿದ್ದಾರೆ. ಕಾನೂನು ವಿದ್ಯಾರ್ಥಿಗಳು ಸಮಾಜ ಸೇವೆಗೂ ತಯಾರಾಗಿರುತ್ತೇವೆ ಎಂದು ನಮ್ಮ ವಿದ್ಯಾರ್ಥಿಗಳು ಸಾಬೀತು ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಗೀತಾಶ್ರೀ ಪ್ರಾರ್ಥಿಸಿದರೆ, ಭಾಗ್ಯಶ್ರೀ ಸ್ವಾಗತಿಸಿದರು. ವಿದ್ಯಾರ್ಥಿ ಅಮರೇಶ್ ನಿರೂಪಿಸಿದರೆ, ಆಶೀಸ್ ಕುಮಾರ್ ವಂದಿಸಿದರು. ಗ್ರಾಮದ ಹಿರಿಯರಾದ ಸಂಗಯ್ಯಸ್ವಾಮಿ ಹಿರೇಮಠ, ಶರಣಗೌಡ ಬಿರಾದಾರ, ಎನ್.ಎಸ್.ಎಸ್ ಕ್ಯಾಂಪ್ ಅಧಿಕಾರಿ ಜ್ಯೋತಿ ಕಡಾದಿ, ಕರುಣಾ ಪಾಟೀಲ್ ಸೇರಿದಂತೆ ಎನ್.ಎಸ್.ಎಸ್ ಅಧಿಕಾರಿಗಳು, ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ