Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿ.ಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ಕೇಂದ್ರ ಸರ್ಕಾರದ ರೈತರ ಗುರುತಿನ ಚೀಟಿ ಕಡ್ಡಾಯ




ಶಿವಮೊಗ್ಗ, ಜನವರಿ 19: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು ಮಾರ್ಗಸೂಚಿಯಂತೆ ದಿನಾಂಕ 01-02-2010ರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ಸಣ್ಣ/ ಅತಿಸಣ್ಣ/ ಮಧ್ಯಮ/ ದೊಡ್ಡ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ.6000/-ಗಳನ್ನು, ತಿಂಗಳಿಗೊಮ್ಮೆ 3 ಕಂತುಗಳಲ್ಲಿ ರೂ.2000/- ರಂತೆ ಪ್ರೋತ್ಸಾಹ ಧನವನ್ನು ಇಲ್ಲಿಯವರೆಗೆ ಪಾವತಿಸಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಮುಂದುವರಿಸಲು ಪ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ಅಗ್ರಿಸ್ಟ್ಯಾಕ್ ಯೋಜನೆ ಅಡಿ ಗುರುತಿನ ಸಂಖ್ಯೆಯನ್ನು ಸೃಜಿಸುವುದು ಕಡ್ಡಾಯಗೊಳಿಸಲಾಗಿದೆ.



ಈಗಾಗಲೇ ರಾಜ್ಯ ಸರ್ಕಾರದ ಪ್ರೂಟ್ಸ್ ತಂತ್ರಾಂಶದಿಂದ ದತ್ತಾಂಶವನ್ನು ಹಂಚಿಕೆ ಮಾಡಿ ಕೆಲವು ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ರೈತರ ಗುರುತಿನ ಸಂಖ್ಯೆಯನ್ನು ಸೃಜಿಸಲಾಗಿರುತ್ತದೆ. ಆದರೆ ಹೆಚ್ಚಿನ ಪಿಎಂ ಕಿಸಾನ್ ಫಲಾನುಭವಿಗಳಿಗೆ ಕೇಂದ್ರದ ರೈತರ ಗುರುತಿನ ಸಂಖ್ಯೆಯನ್ನು ಸೃಜನೆ ಮಾಡಬೇಕಾಗಿರುತ್ತದೆ. ಇದಕ್ಕಾಗಿ ರೈತರ ಇ-ಕೆವೈಸಿ. ಎಲೆಕ್ಟ್ರಾನಿಕ್ ಒಪ್ಪಿಗೆ ಹಾಗೂ ಓಟಿಪಿ ಅಧಾರಿತ ಮೊಬೈಲ್ ಸಂಖ್ಯೆ, ಆಧಾರ್ ಇ-ಸೈನ್ ದೃಡೀಕರಣವು ಕಡ್ಡಾಯವಾಗಿರುತ್ತದೆ.



ಈ ಸಂಬಂಧ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನಿನ ವಿವರಗಳನ್ನು ಪ್ರೊಟ್ಸ್ ತಂತ್ರಾಂಶದಲ್ಲಿ ಸೇರ್ಪಡೆ ಮಾಡುವುದು ಮತ್ತು ಎಲ್ಲಾ ಜಮೀನಿನ ವಿವರಗಳನ್ನು ದಾಖಲಿಸಿರುವುದಾಗಿ ಘೋಷಣೆಯನ್ನೂ ಸಹ ಒಟಿಪಿ ಆಧಾರದ ಮೇಲೆ ಮಾಡಬೇಕಾಗಿರುತ್ತದೆ. ಕೇಂದ್ರದ ಗುರುತಿನ ನೋಂದಣಿ ಆಗದೆ ಇರುವ ಪಟ್ಟಿಯು ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯ ಇರುತ್ತದೆ. ಆದ್ದರಿಂದ ಅಂತಹ ರೈತರು ತಮ್ಮ ಆಧಾರ್ ಕಾರ್ಡಗೆ ಜೋಡಣೆಯಾಗಿರುವ ಮೊಬೈಲ್ ನಂಬರಿನ ಮೊಬೈಲ್‌ನ್ನು ಮತ್ತು ಪ್ರೂಟ್ಸ್ ತಂತ್ರಾಂಶದಲ್ಲಿ ಜೋಡಣೆಯಾಗಿರುವ ಮೊಬೈಲ್ ನಂಬರಿನ ಮೊಬೈಲ್ ಅನ್ನು ತೆಗೆದುಕೊಂಡು ರೈತ ಸಂಪರ್ಕ ಕೇಂದ್ರ್ರಗಳಿಗೆ ಭೇಟಿ ನೀಡಿ, ಮೇಲಿನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಕೊಂಡು ಕೇಂದ್ರದ ಗುರುತಿನ ಸಂಖ್ಯೆಯನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಇದಾದ ನಂತರವೇ ಮುಂದಿನ ಕಂತಿನ ಪಿ.ಎಂ-ಕಿಸಾನ್ ಯೋಜನೆಯ ಪ್ರೋತ್ಸಾಹಧನ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗುತ್ತದೆ.



ಪ್ರಕ್ರಿಯೆ ದಿನಾಂಕ 01-02-2019ರ ಪೂರ್ವದಲ್ಲಿ ಜಮೀನು ಹೊಂದಿರುವ ರೈತರಿಗೆ ಮಾತ್ರ ಅನ್ವಯವಾಗುತ್ತದೆ. ಈ ದಿನಾಂಕದ ನಂತರ ಪಿ.ಎಂ-ಕಿಸಾನ್ ಪ್ರೊತ್ಸಾಹಧನ ಪಡೆಯುತ್ತಿರುವ ರೈತರು ತಮ್ಮ ಹೆಸರಿನಲ್ಲಿರುವ ಜಮೀನು ಮಾರಾಟ ಮಾಡಿದ್ದಲ್ಲಿ, ಅವರ ಹೆಸರಿನಲ್ಲಿ ಹಾಲಿ ಯಾವುದೇ ಜಮೀನು ಇಲ್ಲದಂತಹ ರೈತರಿಗೆ ಪಿ.ಎಂ-ಕಿಸಾನ್ ಪಾವತಿಯನ್ನು ನಿಲ್ಲಿಸಲಾಗಿದೆ ಎಂದು ಶಿವಮೊಗ್ಗ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು