Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದಲ್ಲಿ ಬಾಲ್ಯವಿವಾಹ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ: ಚನ್ನಬಸಪ್ಪ ಪಾಟೀಲ್





ಬಳ್ಳಾರಿ,ಆ.05

ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚು ಬಾಲ್ಯವಿವಾಹ ನಡೆಯುತ್ತಿರುವುದು ವಿಷಾಧಕರ ಸಂಗತಿಯಾಗಿದ್ದು, ಸಮಾಜದಲ್ಲಿ ಬಾಲ್ಯವಿವಾಹ ಕುರಿತು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ ಸೇವೆ) ಚನ್ನಬಸಪ್ಪ ಪಾಟೀಲ್ ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಕೇಂದ್ರ, ಪೋಲಿಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂಟೋನ್‌ಮೆoಟ್ ಪ್ರದೇಶದ ಗಾಲೀಬ್ ಪ್ರೌಢಶಾಲೆ(ಅನುದಾನಿತ)ಯಲ್ಲಿ ಮಂಗಳವಾರ ಆಯೋಜಿಸಿದ್ದ “ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಮೂಡ ನಂಬಿಕೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ” ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಬಾಲ್ಯವಿವಾಹಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರಿಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿ, ಬಾಲ್ಯವಿವಾಹಗಳನ್ನು ನೆರವೇರಿಸುತ್ತಿರುವ ವ್ಯಕ್ತಿಗಳಾದ ಪುರೋಹಿತರು, ಮೌಲಿಗಳು, ಚರ್ಚ್ ಪಾದ್ರಿಗಳು ಮತ್ತು ದೇವಸ್ಥಾನದ ಪೂಜಾರಿಗಳು, ಲಗ್ನ ಪತ್ರಿಕೆ ಮುದ್ರಣ ಮಾಡುವ ಪ್ರಿಟಿಂಗ್ ಪ್ರೆಸ್, ವಾದ್ಯವೃಂದದವರು, ಶಾಮಿಯಾನ ಸಪ್ಲೆöÊಯರ್, ಪೋಟೋಗ್ರಾಫರ್-ವಿಡಿಯೋಗ್ರಾಫರ್ ಸೇರಿದಂತೆ ಭಾಗಿಯಾದ ಇನ್ನಿತರೆ ವ್ಯಕ್ತಿಗಳ ಮೇಲೆ ಕಾನೂನು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಮಕ್ಕಳ ರಕ್ಷಣಾ ಘಟಕದ ನಿಲೋಫಿಯಾ ಅವರು ಮಾತನಾಡಿ, ಮಕ್ಕಳಿಗೆ ಬಾಲ್ಯವಿವಾಹದ ಬಗ್ಗೆ ಜಾಗೃತಿ ಮೂಡಿಸುತ್ತಾ ಬಾಲ್ಯವಿವಾಹಕ್ಕೆ ಒಳಪಟ್ಟ ಬಾಲಕಿಯರು ಅನುಭವಿಸುವ ಕಷ್ಟ, ಪೋಷಕರ ಮೇಲೆ ಕೈಗೊಳ್ಳಬಹುದಾದ ಕಾನೂನು ಕ್ರಮಗಳು ಹಾಗೂ ಪೋಕ್ಸೋ ಕಾಯ್ದೆಯು ಬಾಲ್ಯವಿವಾಹ ನಡೆದ ನಂತರ ಬಾಲಗರ್ಭಿಣಿಯ ಪ್ರಕರಣಗಳಲ್ಲಿ ಅನ್ವಯ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹೇಗೆ ಸಹಕಾರಿಯಾಗುತ್ತದೆ ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.

ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಸುಶೀಲ, ಮಕ್ಕಳ ಸಹಾಯವಾಣಿ ಸಂಖ್ಯೆ-1098 ನ ಕಾರ್ಯವೈಖರಿ, ಸೇವೆಗಳು, ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಕುರಿತು ಮಾಹಿತಿ ನೀಡಿದರು.

ಸಿಆರ್‌ಪಿ ಶಾಹನವಾಜ್ ಅವರು ಮಾತನಾಡಿ, ಎಲ್ಲಾ ಮಕ್ಕಳು ಬಾಲ್ಯವಿವಾಹ ತಡೆಗೆ ಮುಂದಾಗಬೇಕು. ತಮ್ಮ ತಮ್ಮ ಪೋಷಕರಿಗೆ ಈ ಕುರಿತು ಅರಿವು ಮೂಡಿಸಬೇಕು. ಯಾವುದೇ ಭಯಪಡದೇ ಮಕ್ಕಳ ಸಹಾಯವಾಣಿ ಸಂಖ್ಯೆ-1098 ಇಲ್ಲವೇ ಪೊಲೀಸ್ ಸೇವೆ-112 ಗೆ ಮಾಹಿತಿ ನೀಡುವ ಮೂಲಕ ನಮ್ಮ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸಬೇಕು ಎಂದು ಕರೆ ನೀಡಿದರು.

ಪೊಲೀಸ್ ಇಲಾಖೆಯ ನವದುರ್ಗಿ ತಂಡದ ಪವಿತ್ರ ಅವರು ಮಾತನಾಡಿ, ಸೈಬರ್ ಕ್ರೆöÊಮ್ ಮತ್ತು ಅಂತರ್ಜಾಲ ಸುರಕ್ಷತೆ ಕುರಿತು ತಿಳಿಸಿ, ಮಕ್ಕಳು ಮತ್ತು ಮಹಿಳೆಯರಿಗೆ ರಕ್ಷಣೆಯ ಅವಶ್ಯಕತೆಯಿದ್ದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ-112 ಗೆ ಕರೆ ಮಾಡಲು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ನಜೀರ್ ಸೇರಿದಂತೆ ಶಾಲೆಯ ಶಿಕ್ಷಕರು, ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ