Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ವಿಮಾ ಹಣ ಪಾವತಿಸಲು ಆಯೋಗ ಆದೇಶ

ಶಿವಮೊಗ್ಗ :ಡಿಸೆಂಬರ್ 02;  ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಶ್ರೀಮತಿ ಉಷಾಬಾಯಿ ಬಿನ್ ಬಿ.ಎಂ.ರವಿ ಎಂಬುವವರು ವಕೀಲರ ಮೂಲಕ ಆದಿತ್ಯ ಬಿರ್ಲಾ ಹೆಲ್ತ್ ಇನ್ಸೂರೆನ್ಸ್ ಕಂಪನಿ, ಮುಂಬೈ ಮತ್ತು ಫೈನಾನ್ಸ್ ಲಿಮಿಟೆಡ್, ಶಿವಮೊಗ್ಗ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಹಾರ ನೀಡಲು ಆದೇಶಿಸಿದೆ.
ಶ್ರೀಮತಿ ಉಷಾಬಾಯಿ ಎಂಬುವವರು ಮುಂಬೈಯ ಅದಿತ್ಯ ಬಿಲಾ ಹೆಲ್ಸ್ ಇನ್ಸೂರೆನ್ಸ್ ಕಂಪನಿಯು ವಿತರಿಸಿದ 1.00 ಲಕ್ಷ ರೂ. ಕವರೇಜ್ ಹೊಂದಿರುವ ಗ್ರೂಪ್ ಆಕ್ಟೀವ್ ಹೆಲ್ತ್ ಮಾಸ್ಟರ್ ಪಾಲಿಸಿಯನ್ನು ಶಿವಮೊಗ್ಗದ ಫೈನಾನ್ಸ್ ಲಿ.ರ ಮೂಲಕ ಪಡೆದಿದ್ದು, ಪಾಲಿಸಿದಾರರು 2023ರ ಏಪ್ರಿಲ್‌ನಲ್ಲಿ ಚಂದ್ರಗಿರಿ ಆಸ್ಪತ್ರೆಯಲ್ಲಿ ಹರಿಯೋಪ್ಲಾಸ್ಟಿ ಸರ್ಜರಿಯನ್ನು ಮಾಡಿಸಿಕೊಂಡು, ಎಲ್ಲಾ ದಾಖಲೆಗಳನ್ನು ನೀಡಿ ರೂ. 75,469/- ಗಳ ವೈದ್ಯಕೀಯ ವೆಚ್ಚದ ಬಿಲ್‌ನ್ನು ಮರುಪಾವತಿಗಾಗಿ ಕಂಪನಿಗೆ ನೀಡಿರುತ್ತಾರೆ. ಆದರೆ ಕಂಪನಿಯವರು ಹಿಂದಿನ ಖಾಯಿಲೆಯನ್ನು ಮುಚ್ಚಿಟ್ಟು ವಿಮಾ ಪಾಲಿಸಿ ಪಡೆದಿರುತ್ತಾರೆಂದು ಮರುಪಾವತಿಯನ್ನು ತಿರಸ್ಕರಿಸುರತ್ತಾರೆಂದು ಆಯೋಗಕ್ಕೆ ದೂರು ನೀಡಿರುತ್ತಾರೆ.
ಈ ಪ್ರಕರಣವನ್ನು ಆಯೋಗವು ನೊಂದಣಿ ಮಾಡಿಕೊಂಡು ವಿಮಾ ಕಂಪನಿಗೆ ಅಂಚೆ ಮೂಲಕ ನೋಟಿಸ್ ಕಳುಹಿಸಿ ದೂರಿನ ಬಗ್ಗೆ ತಕರಾರು ಇದ್ದಲ್ಲಿ ಖುದ್ದು ಅಥವಾ ವಕೀಲರ ಮೂಲಕ ಸಲ್ಲಿಸುವಂತೆ ಸೂಚಿಸಲಾಗಿತ್ತು. ವಿಮಾ ಕಂಪನಿಯು ದೂರುದಾರರು 10 ವರ್ಷಗಳಿಂದ ಇದ್ದ ಖಾಯಿಲೆಯನ್ನು ಮುಚ್ಚಿಟ್ಟು ಪಾಲಿಸಿ ಮಾಡಿದ್ದಾರೆ ಎಂದು ಕ್ಲೇಮ್‌ನ್ನು ತಿರಸ್ಕರಿಸಿದ್ದು, ಸೇವಾ ನ್ಯೂನತೆಯಾಗಿರುವುದಿಲ್ಲ. ಕಾರಣ ದೂರನ್ನು ವಜಾ ಮಾಡಲು ಕೋರಿರುತ್ತಾರೆ.
ಆದರೆ ಆಯೋಗವು ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ, ಮತ್ತು ವಕೀಲರ ವಾದಗಳನ್ನು ಆಲಿಸಿ, ಕಂಪನಿಯು ಅಪಾದಿಸಿರುವ ಕಾರಣಕ್ಕೆ ಯಾವುದೇ ಪೂರಕವಾದ ದಾಖಲೆಗಳನ್ನು ಹಾಜರುಪಡಿಸಿರುವುದಿಲ್ಲವೆಂದು, ಕ್ಲೇಮ್ ತಿರಸ್ಕರಿಸುವುದು ಯಾವುದೇ ಕಾನೂನಿನಡಿಯಲ್ಲಿ ಬರುವುದಿಲ್ಲವೆಂದು ತೀರ್ಮಾನಿಸಿ ಫರ‍್ಯಾದನ್ನು ಭಾಗಶಃ ಪುರಸ್ಕರಿಸಿ ಇನ್ಸೂರೆನ್ಸ್ ಕಂಪನಿಯು ಸೇವಾ ನ್ಯೂನ್ಯತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿದೆ.
ಆದ್ದರಿಂದ ಅರ್ಜಿದಾರರಿಗೆ ವೈದ್ಯಕೀಯ ವೆಚ್ಚದ ಮೊತ್ತ ರೂ. 73,370/-ಗಳನ್ನು (ವೈದ್ಯಕೀಯ ಬಿಲ್‌ಗಳ ಪ್ರಕಾರ) ವಿಮಾ ಕಂಪನಿಯು ಅರ್ಜಿಯನ್ನು ತಿರಸ್ಕರಿಸಿದ ದಿನಾಂಕದಿಂದ ವಾರ್ಷಿಕ ಶೇ.9% ರ ಬಡ್ಡಿಯೊಂದಿಗೆ ಈ ಆದೇಶವಾದ 45 ದಿನಗಳೊಳಗೆ ಪಾವತಿಸುವಂತೆ, ತಪ್ಪಿದ್ದಲ್ಲಿ ಈ ಆದೇಶದ ದಿನಾಂಕದಿಂದ ರೂ. 73,370/-ಗಳಿಗೆ ವಾರ್ಷಿಕ ಶೇ 10% ರ ಬಡ್ಡಿಯನ್ನು ಪೂರಾ ಹಣ ನೀಡುವವರೆಗೂ ಪಾವತಿಸಲು ಹಾಗೂ ಎದುರುದಾರರ ಸೇವಾ ನ್ಯೂನ್ಯತೆಯಿಂದ ಫರ‍್ಯಾದಿದಾರರಿಗೆ ಉಂಟಾದ ಮಾನಸಿಕ ವ್ಯಥೆಗೆ ರೂ. 20,000/-ಗಳನ್ನು ಹಾಗೂ ರೂ. 10,000/- ಗಳನ್ನು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ಎಂದು ನೀಡಬೇಕೆಂದು ನಿರ್ದೇಶಿಸಿ, ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಶ್ರೀ ಟಿ.ಶಿವಣ್ಣ, ಮಹಿಳಾ ಸದಸ್ಯರಾದ ಶ್ರೀಮತಿ ಸವಿತಾ ಬಿ. ಪಟ್ಟಣಶೆಟ್ಟಿ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರ ಪೀಠವು ನ.28 ರಂದು ಆದೇಶಿಸಿದೆ.
---------------------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ