Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಭೆ ಅರ್ಥಪೂರ್ಣ ಶತಮಾನೋತ್ಸವ ಆಚರಣೆ: ಸಚಿವ ಎಚ್.ಕೆ.ಪಾಟೀಲ

ಬೆಳಗಾವಿ, ನ.5 ಮಹಾತ್ಮಾ‌ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ತಿಳಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ(ನ.5) ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು.

ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು.
ಎಲ್ಲ ವಿವಿ ಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ಪೂರ್ಣಗೊಳಿಸಬೇಕಿದೆ ಎಂದರು.

ರಚನಾತ್ಮಕ ಕಾರ್ಯಕ್ರಮ ಆಯೋಜನೆ:

ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧೀವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು ಎಂದು ಪಾಟೀಲ ತಿಳಿಸಿದರು.

ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು.

ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ. ಅಂತರರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ.

ಬೆಳಗಾವಿ ಅಧಿವೇಶನ ಕುರಿತು ಸ್ಥಳೀಯ ನಾಟಕಕಾರರು ಒಂದು ವಿಶೇಷ ನಾಟಕವನ್ನು ರಚಿಸುವಂತೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ವೀರಪ್ಪ ಮೊಯ್ಲಿ ಅವರು, ಶತಮಾನೋತ್ಸವ ಸ್ಮರಣೀಯವಾಗಿಸಲು ಶತಮಾನೋತ್ಸವ ಉದ್ಯಾನ ಮತ್ತು ಭವನ‌ ನಿರ್ಮಾಣ ಮಾಡಬೇಕಿದೆ ಎಂದರು.

ಇದಲ್ಲದೇ ಮಹಾತ್ಮಾ ಗಾಂಧಿ ಪುತ್ಥಳಿ ನಿರ್ಮಾಣ; ಅಧಿವೇಶನ ಸ್ಥಳದಲ್ಲಿ ಗಾಂಧಿ ಸ್ಮಾರಕ; ಛಾಯಾಚಿತ್ರ ಹಾಗೂ ವಸ್ತುಪ್ರದರ್ಶನ ಹಾಗೂ ಖಾಯಂ ಮ್ಯೂಸಿಯಂ ಸ್ಥಾಪಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಶತಮಾನೋತ್ಸವ ಅಂಚೆ ಚೀಟಿ ಬಿಡುಗಡೆ; ಬೆಳಗಾವಿಯಲ್ಲಿ ವಿಚಾರಸಂಕಿರಣ ರೂಪುರೇಷೆ ಸಿದ್ಧಪಡಿಸಬೇಕು ಮತ್ತು ಶತಮಾನೋತ್ಸವ ಸಂದರ್ಭದಲ್ಲಿ ವಿವಿಧ ಸಮ್ಮೇಳನ ಹಮ್ಮಿಕೊಳ್ಳಲು ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶತಮಾನೋತ್ಸವ ಸಮಿತಿಯ ಸಂಚಾಲಕರಾದ ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ ಅವರು, ಅಧಿವೇಶನದ ಶತಮಾನೋತ್ಸವವು ಒಂದು ವರ್ಷದ ಕಾರ್ಯಕ್ರಮ. ಮುಂದಿನ ಅಕ್ಟೋಬರ್ 2 ರವರೆಗಿನವರೆಗೆ ಅಳವಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.

ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್, ದೇಶಪಾಂಡೆ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ರವೀಂದ್ರ ದೇಶಪಾಂಡೆ, ಪ್ರೊ.ಮರಾಠೆ, ನಿಲೇಶ್ ಬೇನಾಳ ಮತ್ತಿತರರು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಸಲಹೆಗಳನ್ನು ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಬೆಳಗಾವಿ ಉತ್ತರ ಶಾಸಕರಾದ ಆಸಿಫ್ (ರಾಜು) ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಓ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಸಮಿತಿಯ ಸದಸ್ಯರಾದ ಎನ್.ಆರ್.ವಿಶುಕುಮಾರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.



ಅಧಿವೇಶನ ಸ್ಥಳ; ಹುದಲಿ ಭೇಟಿ:

ಸಭೆಯ ಬಳಿಕ ಸಮಿತಿಯ ಅಧ್ಯಕ್ಷರು, ಗೌರವ ಅಧ್ಯಕ್ಷರು, ಸಂಚಾಲಕರು, ಸದಸ್ಯರು ಕಾಂಗ್ರೆಸ್ ಅಧಿವೇಶನ‌ನಡೆದ ಸ್ಥಳವಾದ ಟಿಳಕವಾಡಿ, ವೀರಸೌಧಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನ ಹಾಗೂ ಕಾಂಗ್ರೆಸ್ ಬಾವಿಯನ್ನು ವೀಕ್ಷಿಸಿ, ಜಿಲ್ಲಾಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.
ನಂತರ ಲೆಲೆ ಮೈದಾನ, ಸಿಪಿಎಡ್ ಮೈದಾನ; ಕಣಬರಗಿಯಲ್ಲಿರುವ ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಮತ್ತು ಹುದಲಿಯಲ್ಲಿರುವ ಮಹಾತ್ಮಾ ಗಾಂಧೀಜಿ ಸ್ಮಾರಕವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಎಚ್‌.ಕೆ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಗೌರವ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಸಮಿತಿಯ ರಾಜ್ಯ ಸಂಚಾಲಕರಾದ ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ, ಸದಸ್ಯರಾದ ಎನ್.ಆರ್.ವಿಶುಕುಮಾರ್, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸಿಫ್(ರಾಜು) ಸೇಠ್, ವಿನಯ ನಾವಲಗಟ್ಟಿ, ಶಿವನಗೌಡ ಪಾಟೀಲ, ರಮೇಶ ಜನಗಲ, ರಾಮಕೃಷ್ಣ ಮರಾಠೆ, ಮತ್ತಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ