Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವ- ವನ್ಯಜೀವಿಗಳ ಸಂಘರ್ಷ ತಡೆಗೆ ಸಮನ್ವಯತೆ ಅಗತ್ಯ: ಡಾ.ಕೆ.ಎನ್ ಬಸವರಾಜ





ಬಳ್ಳಾರಿ,ಡಿ.15

ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಮಾನವ- ವನ್ಯಜೀವಿಗಳ ಸಂಘರ್ಷ ತಡೆಗಟ್ಟಬಹುದಾಗಿದೆ ಎಂದು ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಅವರು ಹೇಳಿದರು.

ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಕಾಯ್ದೆ ಹಾಗೂ ಅಪರಾಧಗಳ ವೈಜ್ಞಾನಿಕ ತನಿಖೆಗೆ ಸಂಬOಧಿಸಿದOತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಳ್ಳಾರಿ ಪ್ರಾದೇಶಿಕ ವಿಭಾಗದ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಹಾಗೂ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಾಧಿಕಾರಿಗಳಿಗೆ ಸಂಡೂರಿನ ಗುರುಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಾಗಾರದಲ್ಲಿ ಕರ್ನಾಟಕ ಅರಣ್ಯ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಹಾಗೂ ಸರ್ಕಾರಿ ನೌಕರರಿಗೆ ಸಂಬOಧಿಸಿದ ಸೇವಾ ನಿಯಮಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.

ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋದ ಸಹಾಯಕ ನಿರ್ದೇಶಕ ಶೇಷಾದ್ರಿ, ಆರೋಗ್ಯ ಇಲಾಖೆಯ ಸೂಪರಿಂಟೆOಡೆOಟ್ ವೆಂಕಟೇಶ್, ಮತ್ತು ನಿವೃತ್ತ ಡಿಸಿಎಫ್ ಸಿಎಂ ಅಮ್ಮಣ್ಣವರ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪಶುಸಂಗೋಪನೆಯ ಇಲಾಖೆಯ ಉಪನಿರ್ದೇಶಕ ಡಾ.ಎಸ್ ಉಪ್ಪಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು